9Mudigere1A (1)

 

 

ಮೂಡಿಗೆರೆ ತಾಲೂಕಿನ ಹಂಡುಗುಳಿ ಗ್ರಾಮದ ರಸ್ತೆಯಲ್ಲಿ ಬುಧವಾರ ರಾತ್ರಿ ಬೈಕ್‍ವೊಂದರಲ್ಲಿ ಶ್ರೀಗಂಧದ ತುಂಡುಗಳನ್ನು ಸಾಗಿಸುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಇಬರಬರು ಆರೋಪಿಗಳನ್ನು ಬಂಧಿಸಿದ್ದು, ಕೃತ್ಯಕ್ಕೆ ಬಳಸಿದ್ದ ಬೈಕ್ ಹಾಗೂ ಶ್ರೀಗಂಧದ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳಾದ ಎಂ.ಕೆ.ಯೂಸೂಫ್ (48) ಹಾಗೂ ಎಚ್.ಆರ್.ಮನ್ಸೂರ್ (41) ಇವರಿಬ್ಬರು ದ್ವಿಚಕ್ರ ವಾಹನದಲ್ಲಿ ಬುಧವಾರ ರಾತ್ರಿ ತಾಲೂಕಿನ ಹಂಡುಗುಳಿ ರಸ್ತೆಯಲ್ಲಿ 1.129 ಕೇಜಿಯ 15.ಸಾವಿರ ರೂ ಮೌಲ್ಯದ ಶ್ರೀಗಂಧ ಮರದ ತುಂಡಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಟಿ.ಎಂ. ಆಕರ್ಷ್ ಮಾರ್ಗದರ್ಶನದಲ್ಲಿ ಆರ್‍ಎಫ್‍ಒ ಮಂಜುನಾಥ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದ್ದು, ಬೈಕ್ ತಡೆದು ತಪಾಸಣೆ ನಡೆಸಿದಾಗ ಬೈಕ್‍ನಲ್ಲಿದ್ದ ಆರೋಪಿಗಳಿಬ್ಬರು ಓಡಿ ಹೋಗಲು ಪ್ರಯತ್ನಿಸಿದ್ದಾರೆ. ಕೂಡಲೇ ಇಲಾಖೆ ಸಿಬ್ಬಂದಿ ಅವರನ್ನು ಹಿಡಿದು ವಿಚಾರಣೆ ನಡೆಸಿದ್ದಾರೆ. ಆಗ ಅಕ್ರಮವಾಗಿ ಬೈಕಿನಲ್ಲಿ ಶ್ರೀಗಂಧದ ತುಂಡುಗಳು ಸಾಗಿಸುತ್ತಿರುವುದು ಕಂಡು ಬಂದಿದೆ. ಕೂಡಲೇ ಆರೋಪಿಗಳನ್ನು ಬಂಧಿಸಿ ಬೈಕ್ ಹಾಗೂ ಶ್ರೀಗಂಧದ ತುಂಡುಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಡಿಆರ್‍ಎಫ್‍ಒ ಅಶ್ವಥ್, ಗಸ್ತು ಅರಣ್ಯಪಾಲಕರಾದ ಜೆ.ಜಿ.ಉಮೇಶ್, ಎ.ಎಸ್.ಸುರೇಶ್, ವಾಹನ ಚಾಲಕರಾದ ಸುಮಂತ್, ನವರಾಜ್ ಪಾಲ್ಗೊಂಡಿದ್ದರು.

ಬೈಕ್ ಮೇಲೆ PRESS ಎಂದು ಬರೆದುಕೊಂಡಿರುವುದು ಕಂಡುಬಂದಿದ್ದು, ಬಂಧಿತರಲ್ಲಿ ಮನ್ಸೂರ್ ಎಂಬಾತ ಮೂಡಿಗೆರೆಯಲ್ಲಿ ತಾನು ಪತ್ರಕರ್ತ ಎಂದು ಹೇಳಿಕೊಂಡು ತಿರುಗುತ್ತಿದ್ದ ಮತ್ತು ಬೈಕಿನ ಮೇಲೆ ಪ್ರೆಸ್ ಎಂದು ಬರೆಸಿಕೊಂಡಿದ್ದ. ಇದೀಗ ಪ್ರೆಸ್ ಎಂಬ ಬೋರ್ಡ್ ಹಾಕಿಕೊಂಡು ಶ್ರೀಗಂಧದ ಕಳ್ಳಸಾಗಾಣಿಕೆಗೆ ಪ್ರೆಸ್ ಹೆಸರನ್ನು ದುರ್ಬಳಕೆ ಮಾಡಿಕೊಂಡಿರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ