kole 2

 

 

ಮೈಸೂರು ನಗರದಲ್ಲಿ 10 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ಎಸ್ಕೇಪ್‌ ಆಗಿದ್ದ ಆರೋಪಿಯನ್ನ ಕೊಳ್ಳೇಗಾಲದಲ್ಲಿ ಪೊಲೀಸರು ಪತ್ತೆಹಚ್ಚಿದ್ದಾರೆ.

ಕೃತ್ಯ ಎಸಗಿದ್ದ ವಿಕೃತ ಕಾಮುಕ ಮೈಸೂರಿನ ಖಾಸಗಿ ಬಸ್ ನಿಲ್ದಾಣದಿಂದ ಕೊಳ್ಳೇಗಾಲಕ್ಕೆ ಹೋಗಿದ್ದ. ಇತ್ತ ಸಿಸಿಟಿವಿ ದೃಶ್ಯಾವಳಿಗಳನ್ನ ಆಧರಿಸಿ ತನಿಖೆ ನಡೆಸುತ್ತಿದ್ದ ಪೊಲೀಸರು ಕೊಳ್ಳೇಗಾಲದಲ್ಲಿ ಬಂಧಿಸಿ, ಮೈಸೂರಿಗೆ ಕರೆತಂದಿದ್ದಾರೆ.

ಆರೋಪಿ ಕಾಲಿಗೆ ಗುಂಡೇಟು:
ಬಾಲಕಿ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಆರೋಪಿ ಮೈಸೂರಿಗೆ ಕರೆತರುವಾಗ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಬಳಿಕ ಕರೆತಂದು ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ.

ಏನಿದು ಘಟನೆ?

ದಸರಾ ಸಮಯದಲ್ಲಿ ಬಲೂನ್ ವ್ಯಾಪಾರಕ್ಕಾಗಿ ಕಲಬುರಗಿ ಕಡೆಯಿಂದ ಮೈಸೂರಿಗೆ ಹಕ್ಕಿಪಿಕ್ಕಿ ಜನಾಂಗದ 50 ಕ್ಕೂ ಹೆಚ್ಚು ಕುಟುಂಬ ಬಂದಿವೆ. ಇವರು ದೊಡ್ಡಕೆರೆ ಮೈದಾನದ ಸುತ್ತಲಿನ ರಸ್ತೆಯಲ್ಲಿ ನೆಲೆಸಿದ್ದರು. ಬುಧವಾರ ಚಾಮುಂಡೇಶ್ವರಿ ದೇವಾಲಯದ ತೆಪ್ಪೋತ್ಸವ ಮುಗಿಸಿ, ಗುರುವಾರ ಬೇರೆ ಕಡೆ ತೆರಳಲು ಸಿದ್ಧತೆ ನಡೆಸಿದ್ದರು. ಆದ್ರೆ, ಹಿಂದಿನ ರಾತ್ರಿ ವ್ಯಾಪಾರ ಮುಗಿಸಿ ಬಂದ ಬಾಲಕಿ ತಂದೆ, ತಾಯಿಯೊಂದಿಗೆ ಮಲಗಿದ್ದಳು. ಆದ್ರೆ, ಬೆಳಗ್ಗೆ ಎಲ್ಲರೂ ಎದ್ದಾಗ ಬಾಲಕಿ ಸ್ಥಳದಿಂದ ನಾಪತ್ತೆಯಾಗಿದ್ದಳು. ಹುಡುಕಾಡಿದಾಗ ಟೆಂಟ್‌ನಿಂದ 50 ಮೀ ದೂರದಲ್ಲಿರುವ ಮಣ್ಣಿನ ರಾಶಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.

ಇಂದು (ಅಕ್ಟೋಬರ್ 09) ಬೆಳಗ್ಗೆ 6:30ರ ಸುಮಾರಿಗೆ ಜೋಪಡಿಯ ಪಕ್ಕದ ಗುಂಡಿಯಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಶವದ ಮೇಲೆ ಸರಿಯಾಗಿ ಬಟ್ಟೆಯಿರಲಿಲ್ಲ, ಇದರಿಂದ ಕುಟುಂಬಸ್ಥರು ಅತ್ಯಾಚಾರ ಮತ್ತು ಕೊಲೆಯ ಶಂಕೆ ವ್ಯಕ್ತಪಡಿಸಿದ್ದರು. ಬಳಿಕ ಪೊಲೀಸರು ಸಿಸಿಟಿವಿ ಪರಿಶೀಲನೆ ಮಾಡಿದ ಬಳಿಕ ಕಾರ್ತಿಕ್ ಈ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ.

2 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಆರೋಪಿ
ಸಿಸಿಟಿವಿ ದೃಶ್ಯಾವಳಿ ಆಧರಿಸಿ ಸಿದ್ದಲಿಂಗಪುರ ನಿವಾಸಿ ಕಾರ್ತಿಕ್ (31) ಎಂಬಾತನನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. 4 ತಿಂಗಳ ಹಿಂದಷ್ಟೇ ಈತ ಜೈಲಿನಿಂದ ಬಿಡುಗಡೆಯಾಗಿದ್ದ ಈತನನ್ನು ಕೊಳ್ಳೇಗಾಲದಲ್ಲಿ ಅರೆಸ್ಟ್ ಮಾಡಿದ್ದಾರೆ. ಮಂಡ್ಯದಲ್ಲಿ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಸಿಕ್ಕಿಬಿದ್ದಿದ್ದ ಆರೋಪಿ, 2 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ