10Mudigere1A (1)

 

 

ಸುಪ್ರಿಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಮೇಲೆ ಶೂ ಎಸೆದ ವಕೀಲ ರಾಕೇಶ್ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ದಲಿತ ಪ್ರಗತಿಪರ ಸಂಘಟನೆ ಒಕ್ಕೂಟ ಹಾಗೂ ವಿವಿಧ ರಾಜಕೀಯ ಪಕ್ಷದ ಮುಖಂಡರು ಶುಕ್ರವಾರ ಮೂಡಿಗೆರೆ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಬಿ.ಬಿ.ನಿಂಗಯ್ಯ ಮಾತನಾಡಿ, ದೇಶದಲ್ಲಿ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಹಾಗೂ ಪತ್ರಿಕಾರಂಗ ಈ 4 ಅಂಗಗಳಿಗೆ ದಕ್ಕೆ ಉಂಟಾದರೆ ಪ್ರಜಾಪ್ರಭುತ್ವ ವ್ಯವಸ್ಥೆ ಕುಸಿಯುತ್ತದೆ. ವಕೀಲ ರಾಕೇಶ್ ಸಂವಿಧಾನ ವಿರೋಧಿಯಾಗಿದ್ದರಿಂದ ನ್ಯಾಯಾಂಗ ವ್ಯವಸ್ಥೆಗೆ ಗೌರವ ಕೊಡದೇ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಚಪ್ಪಲಿ ಎಸೆದಿದ್ದಾರೆ. ಈ ವ್ಯಕ್ತಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಸಿಪಿಐ ಮುಖಂಡ ಬಿ.ಕೆ.ಲಕ್ಷ್ಮಣ್‍ಕುಮಾರ್ ಮಾತನಾಡಿ, ಇದೊಂದು ನ್ಯಾಯಾಂಗ ವ್ಯವಸ್ಥೆಯ ನೈತಿಕ ಸ್ಥೆರ್ಯ ಕುಸಿಯುವ ಕೃತ್ಯವಾಗಿದೆ. ಇದನ್ನು ಭಾರತೀಯರೆಲ್ಲರೂ ಖಂಡಿಸಬೇಕಿದೆ. ವಕೀಲ ರಾಕೇಶ್ ವಿರುದ್ಧ ಇದೂವರೆಗೂ ಯಾವುದೇ ಕ್ರಮ ವಹಿಸದಿರುವುದು ಕೇಂದ್ರ ಸರಕಾರದ ವೈಪಲ್ಯವಾಗಿದೆ. ಕೂಡಲೇ ಆತನನ್ನು ಬಂಧಿಸಿ ದೇಶದ್ರೋಹದ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಜಿ.ಸುರೇಂದ್ರ, ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಬಿ.ಎಸ್.ಜಯರಾಂಗೌಡ, ಬಿಎಸ್‍ಪಿ ತಾಲೂಕು ಅಧ್ಯಕ್ಷ ಎಲ್.ಬಿ.ರಮೇಶ್, ಟಿಯುಸಿಐ ಜಿಲ್ಲಾಧ್ಯಕ್ಷ ಕೃಷ್ಣಪ್ಪ, ಜಿ.ಪಂ. ಮಾಜಿ ಸದಸ್ಯ ಎಂ.ಎಸ್.ಅನಂತ್, ಎಚ್.ವಿ.ಮಹೇಂದ್ರ ಮೌರ್ಯ, ಯು.ಬಿ.ಮಂಜಯ್ಯ, ಶಂಕರ್ ಬೆಟ್ಟಗೆರೆ, ಪಿ.ಕೆ.ಮುಂಜುನಾಥ್, ಹಾಲಯ್ಯ, ಹರೀಶ್ ಸಬ್ಬೇನಹಳ್ಳಿ, ಹರೀಶ್ ನಲ್ಕೆ, ಸಿ.ಕೆ.ಇಬ್ರಾಹಿಂ, ಎ.ಸಿ.ಅಯೂಬ್‍ಹಾಜಿ, ಜಗದೀಶ್ ಪಲ್ಗುಣಿ, ಎಂ.ಎನ್.ಅಶ್ವಥ್, ಜಯಮ್ಮ, ಆಶಾ, ಜಯಲಕ್ಷ್ಮಿ, ದೇವರಾಜ್ ಸಬ್ಲಿ ಮತ್ತಿತರರಿದ್ದರು.
*****

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ