ಮೂಡಿಗೆರೆ ಪಟ್ಟಣದ ತೋಟಗಾರಿಕೆ ಇಲಾಖೆಯಲ್ಲಿ ರೈತರಿಗೆ ಮೆಣಸಿನ ಬಳ್ಳಿಗಳ ವಿತರಣೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಆಯ್ದ ರೈತರಿಗೆ ಸಾಂಕೇತಿಕವಾಗಿ ಕಾಳುಮೆಣಸಿನ ಬಳ್ಳಿಗಳನ್ನು ವಿತರಿಸಿ ಮಾತನಾಡಿದ ಶಾಸಕಿ ನಯನಾ ಮೋಟಮ್ಮ ; ರಾಜ್ಯ ಸರ್ಕಾರ ರೈತರಿಗೆ ಅನುಕೂಲಕರವಾದ ಹತ್ತು ಹಲವು ಯೋಜನೆಗಳನ್ನು ಕಾರ್ಯರೂಪಕ್ಕೆ ತಂದಿದೆ. ಸರ್ಕಾರದ ಯೋಜನೆಗಳನ್ನು ಅರ್ಹ ರೈತರಿಗೆ ತಲುಪಿಸುವ ಕೆಲಸವನ್ನು ಇಲಾಖೆಗಳು ಸಮರ್ಪಕವಾಗಿ ನಿರ್ವಹಿಸಬೇಕು. ರೈತರು ಇಲಾಖೆಯಿಂದ ಪಡೆದ ಸವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ತೋಟಗಾರಿಕಾ ಇಲಾಖೆಯಿಂದ ನೀಡುವ ಗಿಡಗಳನ್ನು ಸಕಾಲದಲ್ಲಿ ನಾಟಿ ಮಾಡಿ ಅವುಗಳನ್ನು ಪೋಷಣೆ ಮಾಡಿ ಉತ್ತಮ ಬೆಳೆ ತೆಗೆಯಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಪ.ಪಂ. ಉಪಾಧ್ಯಕ್ಷ ರಮೇಶ್ ಹೊಸ್ಕೆರೆ, ಮೂಡಿಗೆರೆ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ ಶ್ವೇತಾ, ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ, ತಾಲ್ಲೂಕಿನ ವಿವಿಧ ಭಾಗಗಳ ರೈತರು ಉಪಸ್ಥಿತರಿದ್ದರು.



