bsp

 

 

ಬಹುಜನರು ದೇಶದ ಆಸ್ತಿ. ಭಾರತದ ಬಹುಜನರೇ ದೊಡ್ಡ ಸಮುದಾಯವಾಗಿದ್ದು ಎಲ್ಲರೂ ಒಗ್ಗೂಡಿಸಿ ದೇಶದ ಆಡಳಿತ ನಡೆಸುವ ರಾಜಕೀಯ ಪ್ರಜ್ಞೆ ಹೆಚ್ಚಿಸಿದವರು ದಾ ದಾ ಸಾಹೇಬ್ ಕಾನ್ಷಿರಾಮ್‌ಎಂದು ಬಿಎಸ್ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಟಿ.ರಾಧಾಕೃಷ್ಣ ಹೇಳಿದರು.

ಚಿಕ್ಕಮಗಳೂರು  ನರಗದ ಜಿಲ್ಲಾ ಬಿಎಸ್ಪಿ ಕಚೇರಿಯಲ್ಲಿ ಜಿಲ್ಲಾ ಸಹೋದರತ್ವ ಸಮಿತಿ ಮಾಸಿಕ ಸಭೆ ಹಾಗೂ ದಾದಾ ಸಾ ಹೇಬ್ ಕಾನ್ಷಿರಾಮ್ ಅವರ ಪರಿನಿರ್ವಾಣ ದಿನದ ಅಂಗವಾಗಿ ಶನಿವಾರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿ ಬಹುಜನರಿಗೆ ರಾಜಕೀಯ ಪ್ರಜ್ಷೆ ಹೆಚ್ಚಿಸಿದ ಕಾನ್ಷಿರಾಮ್ ಪಾತ್ರ ಸ್ಮರಣೀಯ. ದೇಶಾಡಳಿತ ನಡೆಸುವ ಮಾರ್ಗ ತೋರಿದ ರಾಜಕೀಯ ದಾರ್ಶನಿಕ ಕಾನ್ಷಿರಾಮ್ ಅವರನ್ನು ಮರೆಯಲಾಗದು. ಮನುವಾದಿಗಳು ದೇಶವನ್ನು ಆಳುತ್ತಾ ಬಹುಜನರನ್ನು ತುಳಿಯುತ್ತಿದ್ದಾರೆ. ಹೀಗಾಗಿ ಬಹುಜನರ ಕೈಗೆ ಅಧಿಕಾರದ ಚುಕ್ಕಾಣಿ ಸಿಗಬೇಕಿದೆ ಎಂದು ಪ್ರತಿಪಾದಿಸಿದವರು ಎಂದರು.

ಅಸೃಷ್ಟ್ಯರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರನ್ನು ಆಳುವ ವರ್ಗದವರನ್ನಾಗಿ ಮಾಡಿದ ಶ್ರೇ ಯಸ್ಸು ಕಾನ್ಷಿರಾಮ್ ಅವರಿಗೆ ಸಲ್ಲುತ್ತದೆ. ಅಲ್ಲದೇ ಮಾಯಾವತಿ ಅವರನ್ನು ಮೂರು ಭಾರಿ ಮುಖ್ಯಮಂತ್ರಿ ಯನ್ನಾಗಿ ಮಾಡಿ, ಉತ್ತರ ಪ್ರದೇಶದಲ್ಲಿ ಬಡವರಿಗೆ ಭೂಮಿ, ಸಾಲಸೌಲಭ್ಯ ಕಲ್ಪಿಸಿದವರು ಎಂದು ಹೇಳಿ ದರು.

ಬಿಎಸ್ಪಿ ರಾಜ್ಯ ಕಾರ್ಯದರ್ಶಿ ಕೆ.ಬಿ.ಸುಧಾ ಮಾತನಾಡಿ ಭಾರತೀಯರ ಬದುಕಿನಲ್ಲಿ ಭದ್ರವಾಗಿ ಬೆಸೆದು ಕೊಂಡಿರುವ ಪುರೋಹಿತಶಾಹಿಯನ್ನು ವಿರುದ್ಧ ಬುಡ ಸಹಿತ ನಾಶಗೊಳಿಸಿ, ಬಹುಜನ ಸಮಾಜವನ್ನು ಆಳುವ ಸಮಾಜವನ್ನಾಗಿಸುವುದು ಕಾನ್ಷಿರಾಮ್ ಗುರಿಯಾಗಿತ್ತು. ಶೋಷಿತ ಸಮಾಜವು ಆಳುವ ಸಮಾಜ ವಾಗುವುದರಿಂದ ಮಾತ್ರ ಜಾತಿರಹಿತ ಸಮಾಜವನ್ನು ಸೃಷ್ಟಿ ಮಾಡಬಹುದು ಎಂದು ಸಾರಿದವರು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಬಿಎಸ್ಪಿ ತಾಲ್ಲೂಕು ಅಧ್ಯಕ್ಷ ಹೆಚ್.ಕುಮಾರ್ ಮಾತನಾಡಿ ಕಾನ್ಷಿರಾಮ್ ರವರು ಬಿಎಸ್ಪಿಯನ್ನು ಮೂರನೇ ಅತಿದೊಡ್ಡ ರಾಷ್ಟ್ರೀಯ ಪಕ್ಷವಾಗಿಸಿದರು. ತಮಗೆ ಒಲಿದು ಹಲವಾರು ಹುದ್ದೆಗಳನ್ನು ಬದಿಗಿಸಿದವರು. ಅಲ್ಲದೇ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಬಹುದಾದ ಸದಾವಕಾಶ ವನ್ನು ತಳ್ಳಿಹಾಕಿ ಮಯಾವತಿ ಅವರನ್ನು ನಾಯಕಿಯನ್ನಾಗಿ ಸೃಷ್ಟಿಸಿದವರು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಸಹೋದರತ್ವ ಸಮಿತಿಯ ಕಾರ್ಯದರ್ಶಿ ಕೆ.ಎಸ್.ಮಂಜುಳಾ, ಅಸೆಂಬ್ಲಿ ಪ್ರಧಾನ ಕಾರ್ಯದರ್ಶಿಗಳಾದ ಆರ್.ವಸಂತ್, ಸಿದ್ದಯ್ಯ, ಖಜಾಂಚಿ ಟಿ.ಹೆಚ್.ರತ್ನ, ಅಸ್ಮ ಪರ್ವೀನ್, ಕಲಾ ವತಿ, ಲಕ್ಷ್ಮಣ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ