dana 4_page-0001

 

 

ಮೂಡಿಗೆರೆ ತಾಲ್ಲೂಕಿನ ಬಣಕಲ್ ಪೊಲೀಸ್ ಠಾಣೆ ಸಿಬ್ಬಂದಿಯವರು ಮೂವರು ಅಂತರ್ಜಿಲ್ಲಾ ದನ ಕಳ್ಳರನ್ನು ಬಂಧಿಸಿದ್ದಾರೆ.

ಅಂತರ್ಜಿಲ್ಲಾ ದನ ಕಳ್ಳರಾದ ಯೂನಿಸ್ ಕಾರ್ಕಳ, ನಾಸಿರ್ ಮೂಡಬಿದ್ರೆ ಹಾಗೂ ಇಕ್ಬಾಲ್ ಮೂಡಬಿದ್ರೆ ಇವರನ್ನು ಪತ್ತೆಹಚ್ಚಿ ಬಂಧಿಸಿದ್ದು, ಕೃತ್ಯಕ್ಕೆ ಬಳಸಿದ ರಿಟ್ಜ್ ಕಾರುನ್ನು ವಶಕ್ಕೆ ಪಡೆದು ಸೂಕ್ತ ಕಾನೂನು ಕ್ರಮ ಕೈಗೊಂಡಿದ್ದಾರೆ.

ಬಣಕಲ್ ಪೊಲೀಸ್ ಠಾಣೆ ಮೊಕದ್ದಮೆ ಸಂಖ್ಯೆ 56/2025 ಮತ್ತು 72/2025 ಅಡಿಯಲ್ಲಿ ಭಾರತೀಯ ದಂಡ ಸಂಹಿತೆ (BNS) ಕಲಂ 303 ರಂತೆ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚೆಗೆ ಬಣಕಲ್ ಪಟ್ಟಣ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ರಾತ್ರಿ ವೇಳೆ ರಸ್ತೆಯ ಬದಿಯಲ್ಲಿ ಮಲಗಿದ್ದ ಗೋವುಗಳನ್ನು ಹಿಂಸಾತ್ಮಕವಾಗಿ ಹಿಡಿದು ಕಾರಿನಲ್ಲಿ ತುಂಬಿಸಿಕೊಂಡು ಕದ್ದೊಯ್ಯುತ್ತಿದ್ದ ಪ್ರಕರಣಗಳು ನಡೆಯುತ್ತಿದ್ದವು. ಈ ಪ್ರಕರಣಗಳನ್ನು ಬೆನ್ನುಹತ್ತಿ ಹೋದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿತರು ಉಡುಪಿ, ಮಂಗಳೂರು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಸುತ್ತಾ ಮುತ್ತ ನಡೆದ ಹಲವು ದನ ಕಳುವು ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂಬುದು ತನಿಖೆಯಿಂದ ಬೆಳಕಿಗೆ ಬಂದಿದೆ.

ಈ ಕಾರ್ಯಾಚರಣೆಯನ್ನು ಬಣಕಲ್ ಪೊಲೀಸ್ ಠಾಣೆಯ ಪಿಎಸ್ಐ ಶ್ರೀಮತಿ ರೇಣುಕಾ ಅವರ ನೇತೃತ್ವದಲ್ಲಿ ಠಾಣೆಯ ಸಿಬ್ಬಂದಿಯವರು ಯಶಸ್ವಿಯಾಗಿ ನಡೆಸಿದ್ದು, ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಟೆ, ಐಪಿಎಸ್, ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಪೊಲೀಸರ ಕಾರ್ಯವನ್ನು ಶ್ಲಾಘಿಸಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ