18Mudigere2A (2)

 

 

ಮೂಡಿಗೆರೆ ತಾಲೂಕಿನ ಗೋಣಿಬೀಡು ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಬಿ.ಎಲ್.ವಿಜೇಂದ್ರ ಅವರನ್ನು ಗುರುವಾರ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಚುನಾವಣಾಧಿಕಾರಿಯಾಗಿ ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಸುಮಾ ಕರ್ತವ್ಯ ನಿರ್ವಹಿಸಿದರು.

ಬಳಿಕ ನಡೆದ ಅಭಿನಂದನಾ ಸಮಾರಂಭದಲ್ಲಿ ನೂತನ ಅಧ್ಯಕ್ಷ ಬಿ.ಎಲ್.ವಿಜೇಂದ್ರ ಮಾತನಾಡಿ, ಶಾಸಕಿ ನಯನಾ ಮೋಟಮ್ಮ ಅವರ ಮಾರ್ಗದರ್ಶನದಲ್ಲಿ ಅಧಿಕಾರ ಚುಕ್ಕಾಣಿ ಹಿಡಿಯಲು ಸಾಧ್ಯವಾಗಿದೆ. ನಮ್ಮ ಪಂಚಾಯಿತಿ ವ್ಯಾಪ್ತಿ ದೊಡ್ಡದಾಗಿದೆ. ಎಲ್ಲಾ ಸದಸ್ಯರ ವಿಶ್ವಾಸಕ್ಕೆ ತೆಗೆದುಕೊಂಡು ಪಂಚಾಯಿತಿ ಅಭಿವೃದ್ಧಿಪಡಿಸಲು ಹಾಗೂ ಸಾರ್ವಜನಿಕರ ಕೆಲಸ ಶೀಘ್ರದಲ್ಲೇ ಬಗೆಹರಿಸಲು ಶಕ್ತಿ ಮೀರಿ ಶ್ರಮಿಸಲಾಗುವುದು ಎಂದು ಹೇಳಿದರು.

ಗ್ರಾ.ಪಂ. ಸದಸ್ಯರಾದ ಪ್ರಹಲ್ಲಾದ್, ದೀಪಕ್, ರಘು, ಆನಂದ, ಮುಖಂಡರಾದ ಎಂ.ಎಲ್.ಮನು, ಜಗದಿಶ್‍ಗೌಡ ಸೇರಿದಂತೆ ಗ್ರಾಮಸ್ಥರು ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ