deviramma 4

 

 

ದೇವಿರಮ್ಮನ  ಬೆಟ್ಟದಲ್ಲಿ ಜಾತ್ರಾ ಮಹೋತ್ಸವ ಹಿನ್ನೆಲೆ, ಪ್ರತಿ ವರ್ಷದಂತೆ ಮೈಸೂರು ಅರಸರ ಮನೆತನದಿಂದ ದೇವಿಗೆ ಬಾಗಿನ ಅರ್ಪಣೆ ಮಾಡಲಾಗಿದೆ.

ಅನಾದಿ ಕಾಲದಿಂದಲೂ ಅರಸರ ಮನೆತನದಿಂದ ಜಾತ್ರೆಯಲ್ಲಿ ದೇವೀರಮ್ಮನಿಗೆ ಬಾಗಿನ ಕೊಡುವ ಸಂಪ್ರದಾಯವಿದೆ. ಮೈಸೂರು ಸಂಸ್ಥಾನದ ಪರವಾಗಿ ಆಗಮಿಸಿದ ಅರಸು ಸಂಘದ ರಾಜ್ಯಾಧ್ಯಕ್ಷ ದಿನೇಶ್ ತಂಡಕ್ಕೆ ದೇವಾಲಯದ ಆಡಳಿತ ಮಂಡಳಿ ಸ್ವಾಗತಿಸಿತು. ಬಳಿಕ ಹಣ್ಣು, ಕಾಯಿ, ವಿಳ್ಯೆದೆಲೆ, ಸೀರೆ, ಅರಿಶಿನ-ಕುಂಕುಮ ಅರ್ಪಣೆ ಮಾಡಲಾಯಿತು

ರಾಕ್ಷನನ್ನ ಸಂಹರಿಸಿದ ಚಾಮುಂಡೇಶ್ವರಿ ಶಾಂತರೂಪ ತಾಳಿದ್ದು ಬಿಂಡಿಗ ಬೆಟ್ಟದಲ್ಲಿ ಎನ್ನುವ ನಂಬಿಕೆ ಇದೆ. ಇನ್ನೂ ರಾಜರ ಆಳ್ವಿಕೆಯಲ್ಲೂ ಮೈಸೂರಿನಿಂದ ಬಾಗಿನದ ವಸ್ತುಗಳು ಬರುತ್ತಿದ್ದವು.

ಎರಡು ದಿನದಿಂದ ಬೆಟ್ಟದ ಮೇಲಿದ್ದ ದೇವಿ ಮಂಗಳವಾರ ಕೆಳಗಿರುವ ದೇಗುಲದ ಗರ್ಭಗುಡಿ ಪ್ರವೇಶಿಸಿದ್ದಾಳೆ. ಈ ಬಾರಿ ಎರಡು ದಿನ ಬೆಟ್ಟ ಹತ್ತಲು ಅವಕಾಶ ನೀಡಲಾಗಿತ್ತು. ಎರಡು ದಿನದಲ್ಲಿ ಸುಮಾರು 70 ಸಾವಿರಕ್ಕೂ ಅಧಿಕ ಭಕ್ತರು ಬರೀಗಾಲಿನಲ್ಲಿ ಬೆಟ್ಟವನ್ನ ಏರಿ ತಾಯಿಯ ದರ್ಶನ ಪಡೆದಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ