consumer-protection 1

 

 

ಗ್ರಾಹಕನ ಖಾತೆಯಿಂದ ಟಿಡಿಎಸ್ ಹಣ ಕಡಿತಗೊಳಿಸಿದ ವ್ಯವಹಾರದಲ್ಲಿ ಸೇವಾ ನ್ಯೂನತೆ ಎಸಗಿದ ಆರೋಪದಲ್ಲಿ ಬ್ಯಾಂಕ್ ವಿರುದ್ಧ ತೀರ್ಪು ನೀಡಿರುವ ಚಿಕ್ಕಮಗಳೂರು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಕಡಿತಗೊಳಿಸಿದ ಮೊತ್ತವನ್ನು ಬಡ್ಡಿ ಸಹಿತ ಹಿಂತಿರುಗಿಸುವಂತೆ ಹಾಗೂ ಪರಿಹಾರ, ಖರ್ಚು-ವೆಚ್ಚವನ್ನು ನೀಡುವಂತೆ ಆದೇಶ ನೀಡಿದೆ.

ಚಿಕ್ಕಮಗಳೂರು ನಗರದ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿರುವ ಕಲ್ಯಾಣನಗರದ ವಿವೇಕಾನಂದ ಕಾಮತ್ ನಗರದ ಬ್ಯಾಂಕ್ ಆಫ್ ಬರೋಡದಲ್ಲಿ ಓ.ಡಿ. ಖಾತೆ ಹಾಗೂ ಉಳಿತಾಯ ಖಾತೆ ಹೊಂದಿದ್ದಾರೆ. 2020ರ ಆಗಸ್ಟ್‌ನಲ್ಲಿ ಟಿಡಿಎಸ್ ಹಣವೆಂದು ವಿವೇಕಾನಂದ ಕಾಮತ್ ಅವರ ಓ.ಡಿ.ಖಾತೆಯಿಂದ ಒಮ್ಮೆ ರೂ. 30,000, ಮತ್ತೊಮ್ಮೆ 20,000 ಒಟ್ಟು 50,000 ಹಾಗೂ ಉಳಿತಾಯ ಖಾತೆಯಿಂದ ರೂ.7,500 ಅನ್ನು ಕಡಿತಗೊಳಿಸಿದ್ದು, ಈ ಹಣವನ್ನು ಆದಾಯ ತೆರಿಗೆ ಇಲಾಖೆಗೆ ಪಾವತಿಸಿಲ್ಲವೆನ್ನಲಾಗಿದೆ.

ಅಲ್ಲದೆ, ಕಡಿತಗೊಳಿಸಿರುವ ಆದಾಯ ತೆರಿಗೆಯನ್ನು ಮರಳಿ ಪಡೆಯಲು ಅನುಕೂಲವಾಗುವಂತೆ ಆದಾಯ ತೆರಿಗೆ ಕಾಯ್ದೆ ಕಲಂ 16(ಎ) ನಮೂನೆಯನ್ನು ಕೂಡ ನೀಡಿಲ್ಲವೆಂದು ಹೇಳಲಾಗಿದೆ. ಈ ಬಗ್ಗೆ ವಿಚಾರಿಸಿದಾಗ ಸೂಕ್ತ ಉತ್ತರವನ್ನು ನೀಡಿರಲಿಲ್ಲ. ಈ ಬಗ್ಗೆ ವಿವೇಕಾನಂದ ಕಾಮತ್ 2024ರ ನವೆಂಬರ್ 21 ರಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ದೂರು ಸಲ್ಲಿಸಿ, ಸೇವಾ ನ್ಯೂನತೆ ಎಸಗಿರುವುದಾಗಿ ಬ್ಯಾಂಕ್ ವ್ಯವಸ್ಥಾಪಕರ ವಿರುದ್ಧ ಆರೋಪಿಸಿದ್ದರು.

ಈ ಬಗ್ಗೆ ವಿಚಾರಣೆ ನಡೆಸಿದ ಆಯೋಗವು ಇತ್ತೀಚೆಗೆ ತೀರ್ಪು ನೀಡಿದ್ದು, ಟಿಡಿಎಸ್ ಹೆಸರಿನಲ್ಲಿ ಕಡಿತಗೊಳಿಸಿದ ಮೊತ್ತವಾದ ರೂ.68,800 ಅನ್ನು ಶೇ.9ರ ಬಡ್ಡಿ ದರದಲ್ಲಿ 2020ರ ಆಗಸ್ಟ್ 29 ರಿಂದ ಕಾಮತ್ ಅವರಿಗೆ ಪಾವತಿಸುವಂತೆ ಹಾಗೂ ಪರಿಹಾರವಾಗಿ ರೂ.10,000 ಹಾಗೂ ಪ್ರಕರಣದ ಖರ್ಚು-ವೆಚ್ಚಕ್ಕಾಗಿ ರೂ.5000ಗಳನ್ನು ನೀಡುವಂತೆ ಆದೇಶ ನೀಡಿದೆ.

ಅಧ್ಯಕ್ಷರಾದ ಎನ್.ಆರ್.ಚೆನ್ನಕೇಶವ, ಸದಸ್ಯರಾದ ಈ.ಪ್ರೇಮಾ ಮತ್ತು ಡಾ.ಮಂಜುನಾಥ ಎಂ.ಬಮ್ಮನಕಟ್ಟಿ ಇವರನ್ನು ಒಳಗೊಂಡ ಆಯೋಗವು ಪ್ರಕರಣದ ವಿಚಾರಣೆ ನಡೆಸಿ ಈ ತೀರ್ಪು ನೀಡಿದ್ದು, ಬ್ಯಾಂಕ್‌ನ ಸೇವಾ ನ್ಯೂನತೆಯನ್ನು ಎತ್ತಿ ಹಿಡಿದಿದ್ದಾರೆ. ದೂರುದಾರರ ಪರವಾಗಿ ವಕೀಲರಾದ ಎನ್.ದೇವೇಂದ್ರಕುಮಾರ್ ಜೈನ್ ವಾದ ಮಂಡಿಸಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ