nayana motamma

 

 

ಮೂಡಿಗೆರೆ ರೈತಭವನದಲ್ಲಿ ಶನಿವಾರ ಏರ್ಪಡಿಸಿರುವ ಪಕ್ಷದ ಪದಾಧಿಕಾರಿಗಳು, ಪ್ರತಿನಿಧಿಗಳೊಂದಿಗೆ ಏರ್ಪಡಿಸಿರುವ ಸಂವಾದ ಕಾರ್ಯಕ್ರಮದ ಬಗ್ಗೆ ಮೂಡಿಗೆರೆ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಹೆಚ್.ಜಿ. ಸುರೇಂದ್ರ ಅವರು ನೀಡಿರುವ ಹೇಳಿಕೆಯ ಬಗ್ಗೆ ಶಾಸಕಿ ನಯನಾ ಮೋಟಮ್ಮನವರು ಪ್ರತಿಕ್ರಿಯಿಸಿದ್ದಾರೆ.

ಇನ್ನು ಶನಿವಾರದ ಸಭೆಯು ಪಕ್ಷದ ಅಧಿಕೃತ ಕಾರ್ಯಕ್ರಮವಲ್ಲ, ಪಕ್ಷಕ್ಕೂ ಸಭೆಗೂ ಸಂಬಂಧವಿಲ್ಲ ಎಂದು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಕಾರ್ಯಕ್ರಮದ ಬಗ್ಗೆ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರು ನೀಡಿರುವ ಹೇಳಿಕೆ ಕುರಿತು ಶಾಸಕಿ ನಯನಾ ಮೋಟಮ್ಮ ಪತ್ರಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ.

ನಾಳೆಯ ಸಭೆಯಲ್ಲಿ ಪಕ್ಷದಲ್ಲಿ ಭಿನ್ನಮತ ಮತ್ತು ಗೊಂದಲ ಸೃಷ್ಟಿಸುತ್ತಿರುವವರನ್ನು ಹೊರತುಪಡಿಸಿ ಕ್ಷೇತ್ರದಲ್ಲಿ ವಿವಿಧ ಬ್ಲಾಕ್ ಕಾಂಗ್ರೆಸ್, ಹೋಬಳಿ ಕಾಂಗ್ರೇಸ್ ಮತ್ತು ಬೂತ್ ಸಮಿತಿ, ವಿವಿಧ ಸಹಕಾರ ಸಂಘ ಮತ್ತು ಗ್ರಾಮ ಪಂಚಾಯಿತಿ ಪ್ರತಿನಿಧಿಗಳನ್ನು ಒಳಗೊಂಡು ಎಲ್ಲರನ್ನು ಒಗ್ಗೂಡಿಸಿಯೇ ಮಾಡಲಾಗುತ್ತಿದೆ ಎಂದಿದ್ದಾರೆ.

ನಾಳಿನ ಸಭೆಯಲ್ಲಿ ಕ್ಷೇತ್ರದ ಅಭಿವೃದ್ಧಿ ಮತ್ತು ಪಕ್ಷದ ಸಂಘಟನೆ ಬಗ್ಗೆ ಕಾರ್ಯಕರ್ತರು ಮತ್ತು ಮುಖಂಡರ ನಡುವೆ ನೇರಾ ನೇರ ಸಂವಾದ ನಡೆಸಲು ಕಾರ್ಯಕ್ರಮ ಏರ್ಪಡಿಸಲಾಗಿದೆ. ಪಕ್ಷದ ಮುಖಂಡರು ಅಥವಾ ಕಾರ್ಯಕರ್ತರು ಯಾವುದೇ ಅಹವಾಲು, ಸಮಸ್ಯೆ, ಅಭಿಪ್ರಾಯಗಳಿದ್ದರೂ ಸಭೆಯಲ್ಲಿ ಮುಕ್ತವಾಗಿ ಸಂವಾದ ನಡೆಸಲು ಕರೆಯಲಾಗಿದೆ. ಪಕ್ಷದ ಕಾರ್ಯಕರ್ತರು ಯಾವುದೇ ಹೇಳಿಕೆಯಿಂದ ವಿಚಲಿತರಾಗದೇ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು  ಹೇಳಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ