IMG-20251101-WA0029_copy_530x504

 

 

ಮೂಡಿಗೆರೆ ತಾಲೂಕಿನ ಹಿರಿಯ ಅಂಗನವಾಡಿ ಶಿಕ್ಷಕಿ ಶ್ರೀಮತಿ ಎಂ.ಪಿ.ಮೀನಾಕ್ಷಿ (63 ವರ್ಷ) ನಿಧನರಾಗಿದ್ದಾರೆ.

ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಮೀನಾಕ್ಷಿ ಅವರು ಶನಿವಾರ ಮಧ್ಯಾಹ್ನ ಕೊನೆ ಉಸಿರೇಳದಿದ್ದಾರೆ.

ಮೃತರ ಅಂತ್ಯ ಸಂಸ್ಕಾರವನ್ನು ಭಾನುವಾರ ಮಧ್ಯಾಹ್ನ ಅವರ ಪತಿಯ ಮನೆ ಬೇಲೂರು ತಾಲೂಕಿನ ಗೊರವನಹಳ್ಳಿಯಲ್ಲಿ ನೆರವೇರಿಸಲಾಗುತ್ತದೆ ಎಂದು ಕುಟುಂಬ ಮೂಲಗಳು ತಿಳಿಸಿವೆ

ಮೂಡಿಗೆರೆ ತಾಲೂಕಿನ ಮಡ್ಡಿಕೆರೆ ಗ್ರಾಮದ ಮೀನಾಕ್ಷಿ (ಮಂಡಿಕೆರೆ ಅರುಣ್ ಮತ್ತು ಅನಿಲ್ ಅವರ ಸಹೋದರಿ) ಅವರು ತಾಲೂಕಿನ ಹಳೆಕೆರೆ ಮತ್ತು ಮೂಡಿಗೆರೆ ಪಟ್ಟಣ ಸಮೀಪದ ಬಿಳಗುಳ ಶಿವಾಜಿನಗರದ ಅಂಗನವಾಡಿಗಳಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.

ತಾಲೂಕಿನ ಹಿರಿಯ ಅಂಗನವಾಡಿ ಕಾರ್ಯಕರ್ತೆಯರಲ್ಲಿ ಒಬ್ಬರಾಗಿದ್ದರು. ಅವರು ತಮ್ಮ ಸೇವಾನಿಷ್ಠೆಗಾಗಿ ತಾಲೂಕು ಆಡಳಿತದಿಂದ ಗಣರಾಜ್ಯೋತ್ಸವ ಸಂದರ್ಭದಲ್ಲಿ ತಾಲೂಕು ಮಟ್ಟದ ಅತ್ಯುತ್ತಮ ಅಂಗನವಾಡಿ ಶಿಕ್ಷಕಿ ಎಂಬ ಪ್ರಶಸ್ತಿ ಗಳಿಸಿದ್ದರು.

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರ ಸಂಘಟನೆಯಲ್ಲಿ ಸಕ್ರಿಯ ರಾಗಿದ್ದರು ಮತ್ತು ಅಂಗನವಾಡಿ ಕಾರ್ಯಕರ್ತೆಯರ ಪರವಾಗಿ ಹಲವು ಹೋರಾಟಗಳಲ್ಲಿ ಭಾಗವಹಿಸಿದ್ದರು.

ಮೀನಾಕ್ಷಿ ಅವರು ಓರ್ವ ಪುತ್ರ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.

ಮೀನಾಕ್ಷಿ ಅವರ ನಿಧನಕ್ಕೆ ಮೂಡಿಗೆರೆ ತಾಲ್ಲೂಕು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘದ ಅಧ್ಯಕ್ಷೆ ಶ್ರೀಮತಿ ಶೈಲಾ ಸೇರಿದಂತೆ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಕಂಬನಿ ಮಿಡಿದಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ