kabbu

 

 

ಕಬ್ಬಿಗೆ  ಬೆಂಬಲ ಬೆಲೆಗೆ ಒತ್ತಾಯಿಸಿ ಕಬ್ಬು ಬೆಳೆಗಾರರು ಬೆಳಗಾವಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿದ್ದರು. ರೈತರ ಪ್ರತಿಭಟನೆಯ ಕಿಚ್ಚು ತೀವ್ರಗೊಳ್ಳುತ್ತಿದ್ದಂತೆ ಎಚ್ಚೆತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ರೈತರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಭೆ ನಡೆಸಿ, ಪ್ರತಿ ಟನ್ ಕಬ್ಬಿಗೆ 3,300 ರೂ ದರ ನಿಗದಿ ಮಾಡಿದ್ದಾರೆ.

ಪ್ರತಿ ಟನ್ ಕಬ್ಬಿಗೆ 3,500 ರೂ. ಬೆಂಬಲ ಬೆಲೆಗೆ ಒತ್ತಾಯಿಸಿ ಕಬ್ಬು ಬೆಳೆಗಾರರು ಬೆಳಗಾವಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿದ್ದರು. ಆದರೆ, ಸಕ್ಕರೆ ಕಾರ್ಖಾನೆ ಮಾಲೀಕರು ಈ ಬೇಡಿಕೆಯನ್ನು ತಿರಸ್ಕರಿಸಿದ್ದು, 3,500 ರೂಪಾಯಿ ನೀಡಿದರೆ ಭಾರಿ ನಷ್ಟವಾಗುತ್ತದೆ ಎಂದು ವಾದಿಸಿದ್ದರು.

ಅಂತಿಮವಾಗಿ ಸಿಎಂ ಸಿದ್ದರಾಮಯ್ಯ ಅವರು ಇಂದು ರೈತರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಭೆ ನಡೆಸಿ, ಪ್ರತಿ ಟನ್‌ಗೆ 3,300 ರೂಪಾಯಿಗಳನ್ನು ನಿಗದಿಪಡಿಸಿದ್ದಾರೆ.

ಸಭೆಯಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರು ಪ್ರತಿ ಟನ್‌ಗೆ 3,200 ರೂಪಾಯಿಗಳಿಗಿಂತ ಹೆಚ್ಚು ನೀಡಲು ಸಾಧ್ಯವಿಲ್ಲ ಎಂದು ಪಟ್ಟು ಹಿಡಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಅವರು ನಾವು ಸರ್ಕಾರದಿಂದ 50 ರೂ. ಸಬ್ಸಿಡಿ ನೀಡುತ್ತೇವೆ. ನೀವು 50 ರೂ. ಸೇರಿಸಿ ಪ್ರತಿ ಟನ್ ಕಬ್ಬಿಗೆ 3,300 ರೂಪಾಯಿ ನೀಡುವಂತೆ ಸೂಚಿಸಿದರು. ಇದಕ್ಕೆ ರೈತರು ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರು ಒಪ್ಪಿಗೆ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ