ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಚಿಕ್ಕಮಗಳೂರು ತಾಲ್ಲೂಕಿನ ಹಿರೇಗೌಜ ಬಳಿ ಈ ದುರ್ಘಟನೆ ನಡೆದಿದೆ. ಆಪಘಾತದಲ್ಲಿ ಸ್ಥಳದಲ್ಲೇ ಇಬ್ಬರ ಸಾವನ್ನಪ್ಪಿದ್ದು, ಮತ್ತೋರ್ವರ ಸ್ಥಿತಿ ಗಂಭೀರವಾಗಿದೆ.
ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಗ್ರಾಮದ ಬಳಿ ಘಟನೆ, ಕುಮಾರಪ್ಪ (69) ಸತೀಶ್ (35) ಮೃತ ದುರ್ದೈವಿಗಳು. ಮೃತರಿಬ್ಬರು ಚಿತ್ರದುರ್ಗ ಜಿಲ್ಲೆಯ ಚನ್ನಗಿರಿ ಮೂಲದವರು ಎಂದು ತಿಳಿದುಬಂದಿದೆ.
ಹಿರೇಗೌಜ ಗ್ರಾಮದ ತಿರುವಿನಲ್ಲಿ ಘಟನೆ ನಡೆದಿದ್ದು, ಮತ್ತೊಂದು ಕಾರಿನಲ್ಲಿದ್ದ ಡ್ರೈವರ್ ಸ್ಥಿತಿ ಗಂಭೀರವಾಗಿದೆ. ಗಂಭೀರ ಗಾಯಗೊಂಡ ಚಾಲಕ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.



