kaidi

 

 

ಪರಪ್ಪನ ಅಗ್ರಹಾರ ಜೈಲಿನಲ್ಲಿ ಖೈದಿಗಳಿಗೆ  ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಗೃಹ ಸಚಿವ ಪರಮೇಶ್ವರ್‌   ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮುಖ್ಯ ಅಧೀಕ್ಷಕ ಸುರೇಶ್‌, ಜೈಲ್‌ ಅಧೀಕ್ಷಕ ಮ್ಯಾಗೇರಿ, ಸಹಾಯಕ ಅಧೀಕ್ಷಕ ಅಶೋಕ್‌ ಭಜಂತ್ರಿ ಅವರನ್ನು ಅಮಾನತುಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಇನ್ನು ಮುಂದೆ ಈ ರೀತಿ ಪ್ರಕರಣ ಮರುಕಳಿಸದೇ ಇರಲು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅವರ ಮುಖ್ಯಸ್ಥರಾಗಿರುವ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯಲ್ಲಿ ಜಿಲ್ಲಾಧಿಕಾರಿಗಳು, ಎಸ್‌ಪಿ ಇರಲಿದ್ದಾರೆ.

ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ ಆರೋಪದಲ್ಲಿ ಬಂಧಿಯಾಗಿರುವ ಖೈದಿ, ವಿವಿಧ ಅಪರಾಧ ಕೃತ್ಯಗಳಲ್ಲಿ ಬಂಧಿಯಾಗಿರುವ ಖೈದಿಗಳಿಗೆ ಜೈಲಿನಲ್ಲಿ ರಾಜಾತೀಥ್ಯ ನೀಡುತ್ತಿರುವ ವಿಡಿಯೋ ವೈರಲ್ ಆಗಿತ್ತು. ಇದರಿಂದ ಎಚ್ಚೆತ್ತ ಸರ್ಕಾರ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ