ಕಾಡಾನೆ ದಾಳಿಗೆ ಕಾಫಿ ನಾಡಿನಲ್ಲಿ ಮತ್ತೊಂದು ಜೀವ ಬಲಿಯಾಗಿದೆ.
ಕಾಫಿ ತೋಟದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕಾರ್ಮಿಕರೋರ್ವರು ಕಾಡಾನೆ ದಾಳಿಗೆ ಬಲಿಯಾಗಿರುವ ಘಟನೆ ನಡೆದಿದೆ
ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಪಾಲಿಬೆಟ್ಟ ಸಮೀಪ ಈ ದುರ್ಘಟನೆ ನಡೆದಿದೆ
ಪಾಲಿಬೆಟ್ಟ ಸಮೀಪದ ಎಮ್ಮೆಗುಂಡಿ ಕಾಫಿ ಎಸ್ಟೇಟ್ ನಲ್ಲಿ ಸೋಮವಾರ ಈ ದುರ್ಘಟನೆ ನಡೆದಿದೆ
ಎಮ್ಮೆಗುಂಡಿ ತೋಟದಲ್ಲಿ ಕೆಲಸನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಕಾಡಾನೆ ಏಕಾಏಕಿ ದಾಳಿ ನಡೆಸಿದ್ದು ಕಾರ್ಮಿಕ ಹನುಮಂತ (57) ಎಂಬುವರು ಬಲಿಯಾಗಿದ್ದಾರೆ.
ಮೃತ ಹನುಮಂತಪ್ಪ ಬಳಿಯಿದ್ದ ಮತ್ತೋರ್ವ ಕಾರ್ಮಿಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಾಫಿನಾಡು ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಕಾಡಾನೆ ಹಾವಳಿ ಮಿತಿಮೀರಿದ್ದು ನಿರಂತರವಾಗಿ ಜನರು ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ
ಕಾಡಾನೆ ಮತ್ತು ಕಾಡುಕೋಣಗಳ ಹಾವಳಿಯಿಂದ ಜನರು ಜೀವ ಭಯದಿಂದ ಬದುಕು ನಡೆಸುವಂತೆ ಆಗಿದೆ.
ಇದರಿಂದ ಕಾಫಿ ತೋಟಗಳಿಗೆ ಕಾರ್ಮಿಕರು ಕೆಲಸಕ್ಕೆ ಬರಲು ಹಿಂದೇಟು ಹಾಕುತ್ತಿದ್ದು ಇದರಿಂದ ಕಾಫಿ ತೋಟ ನಿರ್ವಹಣೆಗೆ ತುಂಬಾ ತೊಂದರೆಯಾಗಿದೆ.



