ಆರ್. ಹಿತೇಂದ್ರ, ಐಪಿಎಸ್, ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರು, ಕಾನೂನು ಮತ್ತು ಸುವ್ಯವಸ್ಥೆ, ಕರ್ನಾಟಕ ರಾಜ್ಯ ರವರು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಬುಧವಾರ ಕಾನೂನು ಸುವ್ಯವಸ್ಥೆ ಹಾಗೂ ದತ್ತಜಯಂತಿ-2025 ಬಂದೋಬಸ್ತ್ ಸಿದ್ಧತೆಗಳ ಕುರಿತು ಪೊಲೀಸ್ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿದರು.
ಈ ಸಂದರ್ಭದಲ್ಲಿ ದತ್ತ ಜಯಂತಿ ಸಂದರ್ಭದಲ್ಲಿ ಪಾಲಿಸಬೇಕಾದ ನಿಯಮಾವಳಿಗಳು, ಕಾನೂನು ಸುವ್ಯವಸ್ಥೆ ಕುರಿತು ಸೂಕ್ತ ಸಲಹೆ ಮತ್ತು ಸೂಚನೆಗಳನ್ನು ನೀಡಿದರು.

ಸಭೆಯಲ್ಲಿ ಅಮಿತ್ ಸಿಂಗ್, ಐಪಿಎಸ್, ಪೊಲೀಸ್ ಮಹಾ ನಿರೀಕ್ಷಕರು, ಪಶ್ಚಿಮ ವಲಯ, ಮಂಗಳೂರು; ಡಾ. ವಿಕ್ರಮ ಅಮಟೆ, ಐಪಿಎಸ್, ಪೊಲೀಸ್ ಅಧೀಕ್ಷಕರು, ಚಿಕ್ಕಮಗಳೂರು ಜಿಲ್ಲೆ; ಸಿ ಟಿ ಜಯಕುಮಾರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಚಿಕ್ಕಮಗಳೂರು ಜಿಲ್ಲೆ ಮತ್ತು ಜಿಲ್ಲೆಯ ಇತರೇ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು.




