santhosh kotian 2

 

 

ರಾಜ್ಯದ ಗೃಹ ಸಚಿವ ಡಾ. ಜಿ ಪರಮೇಶ್ವರ್ ಮತ್ತು ಅವರ ಪುತ್ರನ ವಿರುದ್ಧ ಹೇಳನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಯುವ ಮೋರ್ಚಾ ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ

ಬುಧವಾರ ಸಂತೋಷ್ ಕೋಟ್ಯಾನ್ ಅವರನ್ನು ಚಿಕ್ಕಮಗಳೂರು ನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ

ಮಂಗಳವಾರ ಚಿಕ್ಕಮಗಳೂರು ನಗರದಲ್ಲಿ ನಡೆದ ಪ್ರತಿಭಟನೆ ಒಂದರಲ್ಲಿ  ಗೃಹ ಸಚಿವರು ಮತ್ತು ಅವರ ಪುತ್ರನ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ಮೇಲೆ ಪೊಲೀಸರು ಸಂತೋಷ ಕೋಟ್ಯಾನ್ ಅವರನ್ನು ವಶಕ್ಕೆ ಪಡೆದಿದ್ದಾರೆ

ರಾಜ್ಯದ ಜೈಲುಗಳಲ್ಲಿ ಖೈದಿಗಳಿಗೆ ರಾಜಾತೀಥ್ಯ ನೀಡಲಾಗುತ್ತಿದೆ ಎಂಬ ಹಿನ್ನೆಲೆಯಲ್ಲಿ ಬಿಜೆಪಿ ಯುವ ಮೋರ್ಚಾ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿತ್ತು.
ಈ ಸಂದರ್ಭದಲ್ಲಿ ಮಾತನಾಡಿದ್ದ ಸಂತೋಷ್ ಕೋಟ್ಯಾನ್ ಅವರು ಪರಮೇಶ್ವರ ಅವರ ಸಮರ್ಥತೆಯನ್ನು ಎತ್ತಿ ತೋರಿಸುವ ನೆಪದಲ್ಲಿ ಅವರ ಪುತ್ರನ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಲಾಗಿದೆ

ಗೃಹ ಸಚಿವರು ಯಾವುದೇ ವಿಚಾರ ಕೇಳಿದರೂ ನನಗೆ ಗೊತ್ತಿಲ್ಲ ವಿಚಾರಿಸಿ ಹೇಳುತ್ತೇನೆ ಎಂದು ಹೇಳುತ್ತಾರೆ ಅವರಿಗೆ ಯಾವುದು ಗೊತ್ತಾಗುವುದಿಲ್ಲ ಕೊನೆಗೆ ಅವರ ಮಗ ಮಗಳಾಗಿ ಬದಲಾಗಿದ್ದು ಸಹ ಅವರಿಗೆ ಗೊತ್ತಾಗಿಲ್ಲ ಎಂದು ಮಾತನಾಡಿದ್ದರು.

ಇದೀಗ ಪರಮೇಶ್ವರ್ ಪುತ್ರನ ಕುರಿತು ಸಂತೋಷ್ ಕೋಟ್ಯಾನ್ ಅವರು ಹೇಳಿರುವ ಈ ಮಾತುಗಳು  ವಿವಾದಕ್ಕೆ ಕಾರಣವಾಗಿದ್ದು ಪೊಲೀಸರು ಅವರನ್ನು ಬಂಧಿಸಿದ್ದಾರೆ

ಸಂತೋಷ್ ಕೋಟ್ಯಾನ್ ಅವರ ಬಂಧನವನ್ನು ಖಂಡಿಸಿ, ಬಿಜೆಪಿ ಕಾರ್ಯಕರ್ತರು ಬುಧವಾರ ಚಿಕ್ಕಮಗಳೂರು ನಗರ ಠಾಣೆಯ ಎದುರು ಪ್ರತಿಭಟನೆ ನಡೆಸಿದರು. ನಗರ ಠಾಣೆ ಮುಂಭಾಗದಲ್ಲಿ ರಸ್ತೆ ತಡೆದು  ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಸಂತೋಷ್ ಕೋಟ್ಯಾನ್ ಅವರನ್ನು ಯಾವುದೇ ಪೂರ್ವ ನೋಟಿಸ್ ನೀಡದೇ ಏಕಾಏಕಿ  ಪೊಲೀಸ್ ವಶಕ್ಕೆ ಪಡೆದ ವಿಚಾರಕ್ಕೆ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಚಿಕ್ಕಮಗಳೂರು ನಗರದಲ್ಲಿ ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ