13Mudigere2A

 

 

ಮೂಡಿಗೆರೆ ಕ್ಷೇತ್ರದಲ್ಲಿ ಹಂತ ಹಂತವಾಗಿ ಎಲ್ಲಾ ಗ್ರಾಮಗಳಲ್ಲಿ ಸಮುದಾಯಭವನ ನಿರ್ಮಿಸಲು ಶ್ರಮಿಸಲಾಗುತ್ತಿದೆ ಎಂದು ಶಾಸಕಿ ನಯನಾ ಮೋಟಮ್ಮ ಹೇಳಿದರು.

ಅವರು ಗುರುವಾರ ತಾಲೂಕಿನ ಹಂತೂರು ಗ್ರಾ.ಪಂ. ವ್ಯಾಪ್ತಿಯ ಜೇನುಬೈಲ್ ಗ್ರಾಮದಲ್ಲಿ ಶಾಸಕರ ಅನುದಾನದಲ್ಲಿ 60 ಲಕ್ಷ ರೂ ವೆಚ್ಚದಲ್ಲಿ ನೂತನ ಸಮುದಾಯಭವನ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.

ಗ್ರಾಮದಲ್ಲಿರುವ ಎರಡು ಪರಿಶಿಷ್ಟ ಜಾತಿ ಕಾಲೋನಿ ಜನರಿಗೆ ಮದುವೆ ಸೇರಿದಂತೆ ಶುಭ ಸಮಾರಂಭಕ್ಕೆ ಸಮುದಾಯಭವನದ ಅಗತ್ಯವಿತ್ತು. ಅದಕ್ಕಾಗಿ 1 ಎಕರೆ ಸರಕಾರಿ ಜಮೀನು ಕೂಡ ಅನೇಕ ವರ್ಷದ ಹಿಂದೆಯೇ ಮೀಸಲಿರಿಸಲಾಗಿತ್ತು. ಆದರೆ ಸಮುದಾಯ ಭವನದ ಕನಸು ಕನಸಾಗಿಯೆ ಉಳಿದಿದೆ ಎಂದು ಸ್ಥಳೀಯರು ತನ್ನ ಗಮನ ಸೆಳೆದಿದ್ದರು. ಹಾಗಾಗಿ 60 ಲಕ್ಷ ರೂ ವೆಚ್ಚದಲ್ಲಿ ಸಮುದಾಯ ನಿರ್ಮಾಣ ಮಾಡಲು ಗುದ್ದಲಿ ಪೂಜೆ ನರೆವೇರಿಸುವ ಜತೆಗೆ ನಾಳೆಯಿಂದಲೇ ಕಾಮಗಾರಿ ಪ್ರಾರಂಭಿಸಲು ಗುತ್ತಿಗೆದಾರರು ಹಾಗೂ ಎಂಜಿನಿಯರ್ ಅವರಿಗೆ ಸೂಚಿಸಲಾಗಿದೆ. ಸಮುದಾಯ ಭವನ ನಿರ್ಮಾಣಗೊಂಡ ಬಳಿಕ ಸ್ಥಳೀಯರು ಸದುಪಯೋಗಪಡಿಸಿಕೊಳ್ಳಬೇಕೆಂದು ಹೇಳಿದರು.

ಗೋಣಿಬೀಡು ಹೋಬಳಿ ಕಾಂಗ್ರೆಸ್ ಅಧ್ಯಕ್ಷ ಸುಬ್ರಾಯಗೌಡ, ಹಂತೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಯು.ಪಿ.ಜಗದೀಶ್, ಸ್ಥಳೀಯ ಮುಖಂಡರಾದ ಜೆ.ಎಂ.ನಾಗೇಶ್‍ಗೌಡ, ಕೆಂಚಯ್ಯ, ಅನಿಲ್, ಜೆ.ಬಿ.ಸತೀಶ್, ವಕೀಲ ದರ್ಶನ್ ಮತ್ತಿತರರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ