16ktg1

 

 

ಸಾಲುಮರದ ತಿಮ್ಮಕ್ಕನವರ ನೆನಪಿನಲ್ಲಿ ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಆವರಣದಲ್ಲಿ ಅತ್ತಿಗಿಡವನ್ನು ನೆಡುವ ಮೂಲಕ ಶ್ರದ್ದಾಂಜಲಿ ಸಲ್ಲಿಸಲಾಯಿತು.

ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ತೇಜಸ್ವಿ ಪ್ರತಿಷ್ಠಾನದ ಸದಸ್ಯ ಕಾರ್ಯದರ್ಶಿಗಳಾದ ಡಾ.ಸಿ.ರಮೇಶ್ ಮಾತನಾಡಿ, ಪರಿಸರ ಸಂರಕ್ಷಣೆ ಕ್ಷೇತ್ರದಲ್ಲಿ ರಾಷ್ಟ್ರಮಟ್ಟದಲ್ಲಿ ಐಕಾನ್ ಆಗಿದ್ದ ಸಾಲುಮರದ ತಿಮ್ಮಕ್ಕ ತಮ್ಮ ಬದುಕಿನ ಮೂಲಕ ಸ್ಪೂರ್ತಿ ಮತ್ತು ಪರಿಸರ ಸಂರಕ್ಷಣೆಗೆ ಪ್ರೇರಣೆಯಾಗಿದ್ದಾರೆ. ಮರಗಳನ್ನು ಉಳಿಸಿ ಬೆಳೆಸಬೇಕಾದ ಕರ್ತವ್ಯವನ್ನು ತಮ್ಮ ಬದುಕಿನ ಮೂಲಕ ತೋರಿಸಿದ್ದಾರೆ ಎಂದರು.

ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಆವರಣದಲ್ಲಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ, ಲೇಖಕಿ ರಾಜೇಶ್ವರಿ ತೇಜಸ್ವಿ ಅವರು ಕೆಲ ವರ್ಷಗಳ ಹಿಂದೆ ನಾಗಲಿಂಗ ಪುಷ್ಪದ ಗಿಡವನ್ನು ತೇಜಸ್ವಿ ಪ್ರತಿಷ್ಠಾನದ ಆವರಣದಲ್ಲಿ ನೆಟ್ಟಿದ್ದರು. ಇಂದು ಆ ಗಿಡ ಬೆಳೆದು ನಿಂತು ರಾಜೇಶ್ವರಿ ತೇಜಸ್ವಿ ಅವರನ್ನು ನೆನಪಿಸುತ್ತದೆ. ಮರವನ್ನು ಉಳಿಸಿ ಬೆಳೆಸಬೇಕಾದ ಮಹತ್ವವನ್ನು ಸಾರಿದ ಸಾಲುಮರದ ತಿಮ್ಮಕ್ಕನವರ ನೆನಪಿನಲ್ಲಿ ತೇಜಸ್ವಿ ಪ್ರತಿಷ್ಠಾನದಲ್ಲಿ ಅತ್ತಿಗಿಡವನ್ನು ನೆಡುವ ಮೂಲಕ ಅವರನ್ನು ಹಸಿರಿನ ಮೂಲಕವೇ ನೆನಪಿಸಿಕೊಳ್ಳುವ ಪ್ರಯತ್ನವಿದು ಎಂದರು.

ಈ ಸಂದರ್ಭದಲ್ಲಿ ಕೃಷಿ ವಿಜ್ಞಾನ ಕೇಂದ್ರದ ಸಸ್ಯ ಸಂರಕ್ಷಣೆ ವಿಜ್ಞಾನಿ ಎಂ.ಎಚ್ ಸುಚಿತ್ರಕುಮಾರಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ನವ್ ದೀಪ್, ತೇಜಸ್ವಿ ಪ್ರತಿಷ್ಠಾನದ ತಾಂತ್ರಿಕ ಸಂಯೋಜಕ ಪ್ರಜ್ವಲ್, ಸಂಯೋಜಕ ನಂದೀಶ್ ಬಂಕೇನಹಳ್ಳಿ, ಸಿಬ್ಬಂದಿ ಸತೀಶ್ ತರುವೆ, ಸಂಗೀತಾ ತರುವೆ, ವಸ್ತು ಸಂಗ್ರಹಕಾರ ಎಂ.ಎಲ್.ಅಶೋಕ್, ಕಲಾವಿದ ಹರ್ಷ ಕಾವಾ, ಜಗದೀಶ್, ಇಸ್ಮಾಯಿಲ್ ಮುಂತಾದವರು ಇದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ