IMG-20251120-WA0012_copy_683x568

 

 

ಚಿಕ್ಕಮಗಳೂರು ಜಿಲ್ಲೆ, ಮೂಡಿಗೆರೆ ತಾಲೂಕಿನ ಕಸಬಾ ಹೋಬಳಿಯ ಗೌತಹಳ್ಳಿ ಗ್ರಾಮದ (ಮೂಡಿಗೆರೆ ವಿದ್ಯಾನಗರ ವಾಸಿ) ಶ್ರೀಮತಿ ವಿಮಲಾ ಹಾಲಪ್ಪಗೌಡ ನಿಧನರಾಗಿದ್ದಾರೆ. ಅವರಿಗೆ 64 ವರ್ಷ ವಯಸ್ಸಾಗಿತ್ತು.

ವಿಮಲಾ ಅವರು  ಗೃಹಮಂಡಳಿಯ ಮಾಜಿ ಅಧ್ಯಕ್ಷರು, ಮೂಡಿಗೆರೆ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷರು, ಹಿರಿಯ ಮುಖಂಡರಾದ ಜಿ. ಹೆಚ್. ಹಾಲಪ್ಪಗೌಡ ಅವರ ಧರ್ಮಪತ್ನಿ.

ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ  ಶ್ರೀಮತಿ ವಿಮಲಾ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಗುರುವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

ವಿಮಲಾ ಅವರು ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದರು, ತಮ್ಮ ಪತಿ ಹಾಲಪ್ಪ ಗೌಡರ ಸಾರ್ವಜನಿಕ ಜೀವನಕ್ಕೆ ಅಪಾರ ಪ್ರೋತ್ಸಾಹ ನೀಡಿದ್ದರು.

ಮೃತರು ಪತಿ, ಇಬ್ಬರು ಪುತ್ರರು, ತಂದೆ ತಾಯಿ, ಮೂವರು ಸಹೋದರರು ಮೂವರು ಸಹೋದರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಮೃತರ ಪಾರ್ಥಿವ ಶರೀರವನ್ನು ಮೂಡಿಗೆರೆ ವಿದ್ಯಾನಗರದ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿದ್ದು. ನಾಳೆ ಶುಕ್ರವಾರ ಬೆಳಗ್ಗೆ 9 ಗಂಟೆಗೆ ಅಂತಿಮ ಸಂಸ್ಕಾರ ನೆರವೇರಿಸಲಾಗುವುದೆಂದು ಕುಟುಂಬದ ಮೂಲಗಳು ತಿಳಿಸಿವೆ.

ವಿಮಲಾ ಅವರ ನಿಧನಕ್ಕೆ ಕರ್ನಾಟಕ ಬೆಳೆಗಾರರ ಒಕ್ಕೂಟ, ಮೂಡಿಗೆರೆ ಬೆಳಗಾರರ ಸಂಘ, ಜಿಲ್ಲಾ ಒಕ್ಕಲಿಗರ ಸಂಘ, ಒಕ್ಕಲಿಗರ ಹಿತರಕ್ಷಣಾ ವೇದಿಕೆ, ಕೆಂಪೇಗೌಡ ಒಕ್ಕಲಿಗರ ವೇದಿಕೆ, ಮೂಡಿಗೆರೆ ತಾಲೂಕು ಮಹಿಳಾ ಒಕ್ಕಲಿಗರ ಸಂಘ, ವಿವಿಧ ರಾಜಕೀಯ ಪಕ್ಷಗಳ ಮುಖಂಡರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ