IMG-20251122-WA0110(1)_copy_624x334

 

 

ಮೂಡಿಗೆರೆ ತಾಲ್ಲೂಕಿನ ಬಿದರಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ವಿನಯ್ ಹಳೇಕೋಟೆ ಮತ್ತು ಉಪಾಧ್ಯಕ್ಷರಾಗಿ ದಿನೇಶ್ ಬಾಳೆಹಳ್ಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಶುಕ್ರವಾರ ಸಂಘದ ಸಭಾಂಗಣದಲ್ಲಿ ನಡೆದ ನೂತನ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ವಿನಯ್ ಹಳೆಕೋಟೆ ಅಧ್ಯಕ್ಷರಾಗಿ ಮತ್ತು ದಿನೇಶ್ ಬಾಳೆಹಳ್ಳಿ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನೂತನ ಅಧ್ಯಕ್ಷ ವಿನಯ ಹಳೆಕೋಟೆಯವರು ಪ್ರಸ್ತುತ ಬಿಜೆಪಿ ತಾಲೂಕು ವಕ್ತಾರರಾಗಿದ್ದಾರೆ. ಇದೇ ಮೊದಲ ಬಾರಿಗೆ ಸಂಘದ ನಿರ್ದೇಶಕರಾಗಿ ವಿರೋಧವಾಗಿ ಆಯ್ಕೆಯಾಗಿದ್ದರು ಈಗ ಅಧ್ಯಕ್ಷರಾಗಿಯೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ಸಹಕಾರ ಸಂಘದ ನಿರ್ದೇಶಕರುಗಳು, ಮಾಜಿ ಅಧ್ಯಕ್ಷರುಗಳು, ಬಿಜೆಪಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಅಭಿನಂದನೆ ಸಲ್ಲಿಸಿದ್ದಾರೆ.

ತಮ್ಮನ್ನು ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆ ಮಾಡಿದ ಸಂಘದ ಎಲ್ಲಾ ನಿರ್ದೇಶಕರು ಹಾಗೂ ಸಹಕಾರ ನೀಡಿದ ಎಲ್ಲ ಮುಖಂಡರಿಗೆ ವಿನಯ್ ಹಳೆಕೋಟೆ ಮತ್ತು ದಿನೇಶ್ ಬಾಳೆಹಳ್ಳಿ ಅಭಿನಂದನೆ ಸಲ್ಲಿಸಿದ್ದಾರೆ

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ