IMG-20251122-WA0045_copy_1077x552_1

 

 

ಚಿಕ್ಕಮಗಳೂರು ಜಿಲ್ಲಾ ಸಹಕಾರಿ ಯೂನಿಯನ್ ನೂತನ ಅಧ್ಯಕ್ಷರಾಗಿ ಜಿ. ಕೆ. ದಿವಾಕರ್ ಗೌಡಹಳ್ಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಜಿಲ್ಲಾ  ಸಹಕಾರ ಯೂನಿಯನ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಜಿ.ಕೆ ದಿವಾಕರ್ ಇವರು ಅವಿರೋಧವಾಗಿ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ಕಡೂರಿನ ಹರೀಶ್ ಅವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ

ಕಳೆದ ಅವಧಿಯಲ್ಲಿ ಜಿಲ್ಲಾ ಸಹಕಾರ ಯೂನಿಯನ್ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಜಿ.ಕೆ. ದಿವಾಕರ್ ಅವರನ್ನು ಈ ಬಾರಿ ಅಧ್ಯಕ್ಷ ಸ್ಥಾನಕ್ಕೆ ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಜಿ.ಕೆ. ದಿವಾಕರ್ ಅವರು ಜಿಲ್ಲೆಯ ಹಿರಿಯ ಸಹಕಾರಿಗಳಲ್ಲಿ ಒಬ್ಬರಾಗಿದ್ದಾರೆ. ಇವರು ಮೂಡಿಗೆರೆ ತಾಲೂಕು ಗೌಡಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಕಳೆದ 40 ವರ್ಷಗಳಿಂದ ಸತತವಾಗಿ ಆಯ್ಕೆಯಾಗುತ್ತಾ ಬರುತ್ತಿದ್ದಾರೆ.

ಗೌಡಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘವನ್ನು ಅತ್ಯುತ್ತಮ ರೀತಿಯಲ್ಲಿ ಕಟ್ಟಿ ಬೆಳೆಸಿ ಜಿಲ್ಲೆಯ ಪ್ರಮುಖ ಸಹಕಾರಿ ಸಂಘಗಳಲ್ಲಿ ಒಂದಾಗಿ ಗುರುತಿಸಿಕೊಳ್ಳುವಂತೆ ಮಾಡಿದ್ದಾರೆ

ಮೂಡಿಗೆರೆ ಪಿಸಿಎಆರ್‌ಡಿ ಬ್ಯಾಂಕ್ ನ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ

ಸಹಕಾರ ಯುನಿಯನ್ ನೂತನ ಅಧ್ಯಕ್ಷರಾದ ಜಿ.ಕೆ ದಿವಾಕರ್ ಅವರಿಗೆ ಜಿಲ್ಲೆಯ ಶಾಸಕರುಗಳು, ಸಹಕಾರಿ ಕ್ಷೇತ್ರದ ಹಿರಿಯರು, ವಿವಿಧ ಸಹಕಾರ ಸಂಘಗಳ ಅಧ್ಯಕ್ಷರು ಬಿಜೆಪಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರುಗಳು ಅಭಿನಂದನೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ