24Mudigere1A

 

 

ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಹಾಗೂ ತಾಲೂಕು ಆಟೋ ಚಾಲಕರ ಮತ್ತು ಮಾಲೀಕರ ಸಂಘದ ವತಿಯಿಂದ ನ.29ರಂದು ಪಟ್ಟಣದ ಅಡ್ಯಂತಾಯ ರಂಗಮಂದಿರದಲ್ಲಿ ಕನ್ನಡದ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಆಟೋ ಸಂಘದ ಗೌರವಾಧ್ಯಕ್ಷ ಎಂ.ಎಚ್. ಅಮರನಾಥ್ ಹೇಳಿದರು.
ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನ.29ರಂದು ಮಧ್ಯಾಹ್ನ 2 ಗಂಟೆಗೆ ಪಟ್ಟಣದ ಪ್ರಮುಖ ರಸ್ತೆಯಲ್ಲಿ ವೀರಗಾಸೆ, ಡೊಳ್ಳುಕುಣಿತ, ಸುಗ್ಗಿ ಕುಣಿತ, ನಾಸಿಕ್ ಡೋಲ್ ಮತ್ತು ಡಿಜೆ ಮೂಲಕ ಕನ್ನಡ ನಾಡಿನ ಮಹತ್ವ ಸಾರುವ ಬಗ್ಗೆ ಸ್ತಬ್ಧಚಿತ್ರಗಳೊಂದಿಗೆ ಮೆರವಣಿಗೆ ನಡೆಸಲಾಗುವುದು.ಮೆರವಣಿಗೆಗೆ ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ.ಪ್ರಾಣೇಶ್ ಚಾಲನೆ ನೀಡಲಿದ್ದಾರೆ.
ಸಂಜೆ ನಡೆಯುವ ಸಭಾ ಕಾರ್ಯಕ್ರಮವನ್ನು ಶಾಸಕಿ ನಯನಾ ಮೋಟಮ್ಮ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ರಾಜ್ಯೋತ್ಸವ ಸಮಿತಿ ಅಧ್ಯಕ್ಷ ಜಿ.ಪ್ರಕಾಶ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎಂಎಲ್‍ಸಿ ಸಿ.ಟಿ.ರವಿ, ಪ.ಪಂ. ಅಧ್ಯಕ್ಷ ಕೆ.ವೆಂಕಟೇಶ್, ಕರ್ತವ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಸನ್ನಕುಮಾರ್, ಆಟೋ ಚಾಲಕಿ ಭಾರತಿ ದಿನಕರ್ ಸೇರಿದಂತೆ ವಿವಿಧ ಸಂಘ ಸಂಸ್ಥೆಯ ಅಧ್ಯಕ್ಷರು ಭಾಗವಹಿಸಲಿದ್ದಾರೆಂದು ಹೇಳಿದರು.
ಸಭಾ ಕಾರ್ಯಕ್ರಮದ ಬಳಿಕ ಚನ್ನರಾಯಪಟ್ಟಣದ ಸಿಂಚನ ಮೆಲೋಡಿಸ್‍ನಿಂದ ಸಂಗೀತ  ರಸಮಂಜರಿ ಕಾರ್ಯಕ್ರಮ ನಡೆಯಲಿದೆ.
ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಗೌರವ ಸಮರ್ಪಣೆ,  ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಏರ್ಪಡಿಸಿದ್ದ ವಿವಿಧ ಕ್ರೀಡೆಯಲ್ಲಿ ಗೆಲುವು ಸಾಧಿಸಿದ ಕ್ರೀಡಾಪಟುಗಳಿಗೆ ಹಾಗೂ ವಿಶೇಷ ಅಲಂಕೃತ ಆಟೋ ರಿಕ್ಷಾಕ್ಕೆ ಬಹುಮಾನ ವಿತರಿಸಲಾಗುವುದು.
ಕನ್ನಡ ಹಬ್ಬದ ಸಂಭ್ರಮಾಚರಣೆ ಹಿನ್ನಲೆಯಲ್ಲಿ ಪಟ್ಟಣದ ಪ್ರಮುಖ ರಸ್ತೆಯಲ್ಲಿ ವಿದ್ಯುತ್ ದೀಪಾಲಂಕಾರದಿಂದ ವೈಭವೀಕರಿಸಲು ಸಿದ್ಧತೆ ನಡೆದಿದೆ. ಕನ್ನಡದ ಹಬ್ಬ ಆಚರಣೆಗೆ ಎಲ್ಲಾ ಸಂಘ ಸಂಸ್ಥೆ ಮುಖಂಡರು ಹಾಗೂ ಸಾರ್ವಜನಿಕರು ಅಧಿಕ ಸಂಖ್ಯೆಯಲ್ಲಿ  ಭಾಗವಹಿಸಬೇಕೆಂದು ಮನವಿ ಮಾಡಿದರು.
ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಯು.ಬಿ.ನಾಗೇಶ್, ಕಾರ್ಯದರ್ಶಿ ನಾಗರಾಜು ಬೆಟ್ಡಗೆರೆ, ಖಜಾಂಚಿ ಎಸ್.ಹರೀಶ್, ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಜಿ.ಪ್ರಕಾಶ್, ಕಾರ್ಯದರ್ಶಿ ಎ.ಚಂದ್ರೇಶ್, ಖಜಾಂಚಿ ಎ.ರಾಜು, ಉಮೇಶ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ