22ckm1

 

 

ತೇಜಸ್ವಿ ಪ್ರತಿಷ್ಠಾನದ ಬೆಳವಣಿಗೆಗೆ ಪ್ರಾರಂಭದಿಂದಲೂ ಹಲವರು ಸಹಕಾರ ನೀಡುತ್ತಾ ಬಂದಿದ್ದು ಮುಂದೆಯೂ ಕೂಡ ಎಲ್ಲರ ಸಹಕಾರ ಅಗತ್ಯ ಎಂದು ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ನೂತನ ಅಧ್ಯಕ್ಷ ಡಾ.ಪ್ರದೀಪ್ ಕೆಂಜಿಗೆ ಹೇಳಿದರು.

ಚಿಕ್ಕಮಗಳೂರಿನಲ್ಲಿ ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.

2007ರಲ್ಲಿ ವಿಸ್ಮಯ ಪ್ರತಿಷ್ಠಾನ ಎಂಬ ಹೆಸರಿನಿಂದ ಪ್ರಾರಂಭವಾಗಿ ಆ ನಂತರದಲ್ಲಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಜೀವವೈವಿದ್ಯ ಸಂಶೋಧನಾ ಕೇಂದ್ರ ಎಂದಾಯಿತು. ಪ್ರಸ್ತುತ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನವಾಗಿ ಸಕ್ರಿಯವಾಗಿ ಕಾರ್ಯ ನಿರ್ವಹಿಸಿಕೊಂಡು ಬರುತ್ತಿದೆ ಎಂದರು.

ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಸಿ.ರಮೇಶ್ ಮಾತನಾಡಿ, ತೇಜಸ್ವಿ ಪ್ರತಿಷ್ಠಾನದ ದ್ಯೇಯ್ಯೋದ್ದೇಶಗಳಿಗೆ ಪೂರಕವಾಗಿ ಕಾರ್ಯ ನಿರ್ವಹಿಸಿಕೊಂಡು ಬರಲಾಗುತ್ತಿದೆ. ಪ್ರತಿಷ್ಠಾನವು ನಿರಂತರ ಚಟುವಟಿಕೆಗಳ ಮೂಲಕ ಜ್ಞಾನಾಸಕ್ತರನ್ನು ತಲುಪುವಲ್ಲಿ ಸಕ್ರಿಯವಾಗಿದೆ ಎಂದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳಾದ ಮೀನಾ ನಾಗರಾಜ್ ಅವರು, ತೇಜಸ್ತಿ ಪ್ರತಿಷ್ಠಾನದ ನೂತನ ಪದಾಧಿಕಾರಿಗಳನ್ನು ಅಭಿನಂದಿಸಿ ಮಾತನಾಡಿ, ನೂತನ ತಂಡದ ಮಾರ್ಗದರ್ಶನದಲ್ಲಿ ಇನ್ನಷ್ಟು ಸಕ್ರಿಯ ಹಾಗೂ ಸಾರ್ಥಕ ಕಾರ್ಯಕ್ರಮಗಳು ನಡೆಯಲಿ. ಜಿಲ್ಲಾಡಳಿತ ಪ್ರತಿಷ್ಠಾನದ ಚಟುವಟಿಕೆಗಳಿಗೆ ಸದಾ ಬೆಂಬಲ ನೀಡುತ್ತದೆ ಎಂದರು.

ಈ ಸಂದರ್ಭದಲ್ಲಿ ತೇಜಸ್ವಿ ಪ್ರತಿಷ್ಠಾನದ ನೂತನ ಅಧ್ಯಕ್ಷರಾದ ಡಾ.ಪ್ರದೀಪ ಕೆಂಜಿಗೆ ಸದಸ್ಯರಾದ ರಾಘವೇಂದ್ರ, ರವೀಶ್ ಕ್ಯಾತನಬೀಡು, ರುದ್ರಸ್ವಾಮಿ ಅವರನ್ನು ಜಿಲ್ಲಾಧಿಕಾರಿ ಮೀನಾ ನಾಗರಾಜ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಸಿ.ರಮೇಶ್ ಅಭಿನಂದಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ ಅಮಟೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಹಿರಿಯ ಎಲೆಕ್ಟ್ರೀಷಿಯನ್ ಶ್ರೀನಿವಾಸ್, ನವದೀಪ್, ಪೂರ್ಣೇಶ್, ಶಾಮಿಲಿ, ಮಲ್ಲಿಕ್, ತೇಜಸ್ವಿ ಪ್ರತಿಷ್ಠಾನದ ಸಂಯೋಜಕ ನಂದೀಶ್ ಬಂಕೇನಹಳ್ಳಿ, ಕೀಟತಜ್ಞ ಡಾ.ಅವಿನಾಶ್, ಲೇಖಕ ಪೂರ್ಣೇಶ್ ಮತ್ತಾವರ ಇದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ