ಮೂಡಿಗೆರೆ ತಾಲ್ಲೂಕು ದಾರದಹಳ್ಳಿ “ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ” ಇದರ ನೂತನ ಅಧ್ಯಕ್ಷರಾಗಿ ಕೆ.ಎಂ. ಸಿದ್ದೇಶ್ ಕೆಸವೊಳಲು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ಸಂಘದ ಸಭಾಂಗಣದಲ್ಲಿ ನೆರವೇರಿದ ನೂತನ ಅಧ್ಯಕ್ಷ ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷರಾಗಿ ಸಿದ್ದೇಶ್ ಮತ್ತು ಉಪಾಧ್ಯಕ್ಷರಾಗಿ ಶ್ರೀಮತಿ ಸಿ.ಕೆ. ಧಾರ್ಮಿಕ ದಿನೇಶ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನೂತನ ಅಧ್ಯಕ್ಷ ಸಿದ್ದೇಶ್ ಅವರು ವಿವಿಧ ಸಂಘಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದಾರೆ. ಕೆಸವೊಳಲು ಕೂಡಿಗೆ ದೇವಸ್ಥಾನದ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ. ಆಯ್ಕೆಯಾದ ಸಿದ್ದೇಶ್ ಕೆಸವೊಳಲು ಇವರಿಗೆ ಸಂಘದ ನಿರ್ದೇಶಕರು, ಮಾಜಿ ಅಧ್ಯಕ್ಷರುಗಳು, ವಿವಿಧ ರಾಜಕೀಯ ಪಕ್ಷ ಮತ್ತು ಸಂಘಸಂಸ್ಥೆಗಳ ಪದಾಧಿಕಾರಿಗಳು ಶುಭಾಶಯ ಕೋರಿದ್ದಾರೆ.



