IMG-20251128-WA0022_copy_841x660

 

 

ಮನೆ ಮುಂದೆ ನಿಂತಿದ್ದ ಬಾಲಕನ ಮೇಲೆ ಚಿರತೆ  ದಾಳಿ ನಡೆಸಿದ ಘಟನೆ ತರೀಕೆರೆ  ತಾಲೂಕಿನ ಬೈರಾಪುರ ಗ್ರಾಮದಲ್ಲಿ ನಡೆದಿದೆ.

ಹೃದಯ್ (11) ಚಿರತೆ ದಾಳಿಯಿಂದ ಗಾಯಗೊಂಡ ಬಾಲಕ. ಮನೆಯ ಬಳಿ ನಿಂತಿದ್ದ ವೇಳೆ ಬಾಲಕನ ಮೇಲೆ ಚಿರತೆ ದಾಳಿ ನಡೆಸಿದೆ. ಗಂಭೀರ ಗಾಯಗೊಂಡ ಬಾಲಕನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.

ಲಿಂಗದಹಳ್ಳಿ ಅರಣ್ಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ವಾರದ ಹಿಂದಷ್ಟೆ 5 ವರ್ಷದ ಬಾಲಕಿ ಚಿರತೆ ದಾಳಿಗೆ ಬಲಿಯಾಗಿದ್ದಳು. ಆ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಕಡೆ ಚಿರತೆ ದಾಳಿ ಪ್ರಕರಣ ನಡೆದಿದೆ.

ಅರಣ್ಯ ಇಲಾಖೆ  ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದು, ಚಿರತೆಯನ್ನು ಸೆರೆಹಿಡಿಯುವಂತೆ ಆಗ್ರಹಿಸಿದ್ದಾರೆ.

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ