oplus_131072

 

 

ರೋಟರಿ ಸಂಸ್ಥೆ ಹಾಗೂ ಹೊಯ್ಸಳ ಹೆಲ್ತ್ ಕೇರ್ ವತಿಯಿಂದ ಡಿಸೆಂಬರ್ 3ರಂದು ಪಟ್ಟಣದ ಜೇಸಿ ಭವನದಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 1.30 ಗಂಟೆವರೆಗೆ ನುರಿತ ತಜ್ಞರಿಂದ ಉಚಿತ ಆರೋಗ್ಯ ತಪಾಸಣೆ ಮತ್ತು ಪ್ರಥಮ ಚಿಕಿತ್ಸೆ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ರೋಟರಿ ಸಂಸ್ಥೆ ಅಧ್ಯಕ್ಷ ಎಚ್.ಎನ್ ಪ್ರಸಾಧ್ ಹೇಳಿದರು.

ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರತಿ ವರ್ಷ ರೋಟರಿ ಸಂಸ್ಥೆಯಿಂದ ಆರೋಗ್ಯ, ಶಿಕ್ಷಣ, ರಸ್ತೆ ಸುರಕ್ಷತೆ, ಪರಿಸರ ಸಂರಕ್ಷಣೆ ಸೇರಿದಂತೆ ಅನೇಕ ಜನಪರ ಕಾರ್ಯಕ್ರಮಗಳನ್ನು ಮಾಡಿಕೊಂಡು ಬರಲಾಗಿದೆ. ಇದರಲ್ಲಿ ಆರೋಗ್ಯಕ್ಕೆ ಹೆಚ್ಚು ಒತ್ತು ನೀಡುತ್ತಿದ್ದು, ಈ ಬಾರಿ ಹೊಯ್ಸಳ ಹೆಲ್ತ್ ಕೇರ್ ಸಹಯೋಗದಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರ ಏರ್ಪಡಿಸಲಾಗಿದೆ ಎಂದು ಹೇಳಿದರು.

ಹೊಯ್ಸಳ ಹೆಲ್ತ್‍ಕೇರ್ ಆಡಳಿತ ನಿರ್ದೇಶಕಿ ಡಾ.ಅರ್ಪಿತಾ ಸಿಂಹ ಮಾತನಾಡಿ, ಕಳೆದ 4 ವರ್ಷದಿಂದ ನಮ್ಮ ಹೆಲ್ತ್ ಕೇರ್ ಕೇರ್ ನಿಂದ ರೋಗಿಗಳಿಗೆ ಗುಣಮಟ್ಟದ ವೈದ್ಯಕೀಯ ಸೇವೆ ಸಲ್ಲಿಸುವಲ್ಲಿ ಯಶಸ್ಸು ಕಂಡಿದ್ದೇವೆ. ಇದೀಗ 5ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ್ದ ಹಿನ್ನಲೆಯಲ್ಲಿ ರೋಟರಿ ಸಂಸ್ಥೆಯೊಂದಿಗೆ ಉಚಿತ ಆರೋಗ್ಯ ತಪಾಸಣೆ ಮತ್ತು ಪ್ರಥಮ ಚಿಕಿತ್ಸೆ ತರಬೇತಿ ಹಮ್ಮಿಕೊಳ್ಳಲಾಗಿದೆ. ಶಿಬಿರಕ್ಕೆ ಕರಾವಳಿ ಭಾಗದ ನುರಿತ ವೈದ್ಯರ ತಂಡ ಆಗಮಿಸಲಿದ್ದು, ಶಿಬಿರದಲ್ಲಿ ಸ್ತ್ರೀ ರೋಗ, ಮಕ್ಕಳ ಆರೋಗ್ಯ ಸೇರಿದಂತೆ ಎಲ್ಲಾ ಬಗೆಯ ಆರೋಗ್ಯ ಸಂಬಂಧ ಚಿಕಿತ್ಸೆ ನೀಡಲಾಗುವುದು. ಅಲ್ಲದೇ ಹೃದಯಘಾತ, ಹಾವು ಕಡಿತ, ಸ್ಟ್ರೋಕ್ ಸೇರಿದಂತೆ ನಾನಾ ಚಿಕಿತ್ಸೆ ಬಗ್ಗೆ ಮಾರ್ಗದರ್ಶನ ನೀಡಲಿದ್ದು, ಅಂದು ಹೊಯ್ಸಳ ಯೋಗ ಕ್ಷೇಮ ಶೀರ್ಷಿಕೆಯಡಿಯ್ಲಲಿ ಮನೆ ಮನೆ ಬಾಗಿಲಿಗೆ ವೈದ್ಯಕೀಯ ಸೇವೆ ಕಲ್ಪಿಸುವ ವಾಹನ ಲೋಕಾರ್ಪಣೆಗೊಳ್ಳಲಿದೆ. ಅಲ್ಲದೇ ಹೊಯ್ಸಳ ಹೆಲ್ತ್ ಕಾರ್ಡ್ ವಿತರಿಸಲಾಗುವುದು. ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಳ್ಳಬೇಕೆಂದು ಮನವಿ ಮಾಡಿದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ