IMG-20251208-WA0300

 

 

ಮೂಡಿಗೆರೆ ತಾಲೂಕಿನ ಬಾಳೂರು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ಕೊರತೆಯಿಂದ ಪೋಷಕರು ಹಾಗೂ ಗ್ರಾಮಸ್ಥರು ಬುಧವಾರ ಪ್ರತಿಭಟನೆ ನಡೆಸಿದರು. 1ರಿಂದ 7ನೇ ತರಗತಿ ವರೆಗೆ ಒಟ್ಟು 30ಕ್ಕೂ ಹೆಚ್ಚು ಮಕ್ಕಳು ಓದುತ್ತಿರುವ ಈ ಶಾಲೆಯಲ್ಲಿ ಕೇವಲ ಒಬ್ಬ ಶಿಕ್ಷಕರಷ್ಟೇ ಇದ್ದು, ಅವರು ಸಹ ಅನಾರೋಗ್ಯದ ಕಾರಣದಿಂದ ನಿಯಮಿತವಾಗಿ ಹಾಜರಾಗಲು ಸಾಧ್ಯವಾಗುತ್ತಿಲ್ಲ.
 ಗ್ರಾಮಸ್ಥರಾದ ರಘುಪತಿ ಮಾತನಾಡಿ ಶಾಲೆಯಲ್ಲಿ ಮಕ್ಕಳು ಇದ್ದರು ಪಾಠ ಮಾಡಲು ಶಿಕ್ಷಕರೇ ಇಲ್ಲದ ಸ್ಥಿತಿ, ಸಮೃದ್ಧ ಕಟ್ಟಡವಿದ್ದರೂ ಶಾಲೆ ಮುಚ್ಚುವ ಹಂತಕ್ಕೆ ತಲುಪಿದೆ . ಇದಕ್ಕೆ ಸರ್ಕಾರವೇ ನೇರ ಹೊಣೆಯಾಗಿದೆ ಎಂದರು.
ಬಾಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಮನೋಜ್ ಮಾತನಾಡಿ ಹಲವು ಸಲ ಬಿಇಓಗೆ ವಿಷಯ ತಿಳಿಸಿದರೂ ಯಾವುದೇ ಕ್ರಮ ಕೈಗೊಳ್ಳದ ಸರ್ಕಾರದ ನಿರ್ಲಕ್ಷ್ಯವನ್ನೇ ಈ ಪ್ರತಿಭಟನೆಯ ಮೂಲಕ ಪ್ರಶ್ನಿಸಿದ್ದಾರೆ. “ಇನ್ನು ಮಕ್ಕಳನ್ನು ಬೇರೆ ಶಾಲೆಗೆ ಸೇರಿಸ್ತೀವಿ” ಎಂದು ಪೋಷಕರು ಟಿಸಿ ನೀಡುವಂತೆ ಶಾಲಾ ಆಡಳಿತವನ್ನು ಕೇಳಿರುವುದು ಗಂಭೀರ ವಿಚಾರವಾಗಿದೆ ಎಂದರು.
ಗ್ರಾಮ ಪಂಚಾಯತ್ ಸದಸ್ಯ ಮಂಜುನಾಥ್ ಮಾತನಾಡಿ. ಸರ್ಕಾರಿ ಶಾಲೆಗಳನ್ನು ಉಳಿಸಲು ಸರ್ಕಾರ ಹಲವಾರು ಯೋಜನೆಗಳು ಕೈಗೊಂಡಿದ್ದರು. ಬಾಳೂರು ಶಾಲೆಗೆ ಶಿಕ್ಷಕರ ಕೊರತೆ ಎದುರಾಗಿರುವುದು ಬೇಸರದ ಸಂಗತಿಯಾಗಿದೆ ಎಂದರು.
“ಸರ್ಕಾರದ ನಿರ್ಲಕ್ಷ್ಯದಿಂದ ಸರ್ಕಾರಿ ಶಾಲೆಯೇ ಮುಚ್ಚುವ ಪರಿಸ್ಥಿತಿ ಬಂದರೂ ಯಾರಿಗೂ ಪರವಾಗಿಲ್ಲ!” ಎಂದು ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
 ಈ ಸಂದರ್ಭದಲ್ಲಿ. ಗ್ರಾಮಸ್ಥರಾದ. ಆದರ್ಶ್. ಮದನ್. ಸುರೇಂದ್ರ. ಸಂದೀಪ್. ಸುಧಾಕರ್. ಮೊದಲಾದವರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ