IMG-20251214-WA0250

 

 

ಕೊಟ್ಟಿಗೆಹಾರ  ಪಟ್ಟಣ ವ್ಯಾಪ್ತಿಯಲ್ಲಿ ಹುಚ್ಚು ನಾಯಿಗಳ ಕಾಟ ತೀವ್ರಗೊಂಡಿದ್ದು, ಕಳೆದ ಕೆಲವು ದಿನಗಳಲ್ಲಿ ನಾಲ್ಕು–ಐದು ಜನರಿಗೆ ನಾಯಿ ಕಚ್ಚಿ ಗಾಯಗೊಂಡಿರುವ ಘಟನೆಗಳು ವರದಿಯಾಗಿವೆ. ಪಟ್ಟಣದ ವಿವಿಧ ಭಾಗಗಳಲ್ಲಿ ಹುಚ್ಚು ನಾಯಿ ಏಕಾಏಕಿ ಜನರ ಮೇಲೆ ದಾಳಿ ನಡೆಸಿ ಭಯಭೀತಿ ಉಂಟುಮಾಡಿದ್ದು, ಕೆಲವೊಂದು ಬೀದಿ ನಾಯಿಗಳಿಗೂ ಕಚ್ಚಿರುವುದು ತಿಳಿದುಬಂದಿದೆ.
ನಾಯಿ ಕಚ್ಚಿದ ಗಾಯಗಳಿಂದ ಬಳಲುತ್ತಿರುವವರು ತಕ್ಷಣ ಸ್ಥಳೀಯ ಬಣಕಲ್ ಸಾಯಿ ಕೃಷ್ಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಈ ಘಟನೆಗಳಿಂದ ಕೊಟ್ಟಿಗೆಹಾರ ಜನತೆ ತೀವ್ರ ಆತಂಕಕ್ಕೆ ಒಳಗಾಗಿದ್ದು, ಸಾರ್ವಜನಿಕರ ಸುರಕ್ಷತೆ ಬಗ್ಗೆ ಚಿಂತೆ ವ್ಯಕ್ತವಾಗಿದೆ.
ಭಯಭೀತಗೊಂಡ ಸ್ಥಳೀಯರು ಕೊನೆಗೆ ಹುಚ್ಚು ನಾಯಿಯನ್ನು ಅಟ್ಟಾಡಿಸಿ ಹಿಡಿದು ಹೊಡೆದು ಸಾಯಿಸಿರುವ ಘಟನೆ ಕೂಡ ನಡೆದಿದೆ. ಈ ಹಿನ್ನೆಲೆಯಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು, ಬೀದಿ ನಾಯಿಗಳ ನಿಯಂತ್ರಣ ಹಾಗೂ ಆರೋಗ್ಯ ತಪಾಸಣೆ ನಡೆಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಪಟ್ಟಣದಲ್ಲಿ ಜನರ ಸುರಕ್ಷತೆ ಕಾಪಾಡಲು ಪಶುಸಂಗೋಪನಾ ಇಲಾಖೆ ಹಾಗೂ ಸ್ಥಳೀಯ ಆಡಳಿತ ತ್ವರಿತವಾಗಿ ಸ್ಪಂದಿಸಬೇಕೆಂದು ನಾಗರಿಕರು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ