heli tour2

 

 

ಕಾಫಿನಾಡಿನ   ಸೌಂದರ್ಯ ಸವಿಯುವ ಪ್ರವಾಸಿಗರಿಗಾಗಿ  ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ   ಹೆಲಿಟೂರಿಸಂ   ಆರಂಭಿಸಿದೆ. ಈ ಮೂಲಕ ಜಿಲ್ಲೆಗೆ ಪ್ರವಾಸಿಗರನ್ನು ಆಕರ್ಷಿಸಲು ಸರ್ಕಾರ ಮುಂದಾಗಿದೆ.

ನಾಳೆಯಿಂದ (ಡಿಸೆಂಬರ್ 20) 18 ದಿನಗಳ ಕಾಲ ಚಿಕ್ಕಮಗಳೂರು ಜಿಲ್ಲೆಯ ಆಯ್ದ ಪ್ರವಾಸಿ ತಾಣಗಳ ಆಗಸದಲ್ಲಿ ಹೆಲಿಕಾಪ್ಟರ್ ಸದ್ದು ಮಾಡಲಿದೆ

18 ದಿನಗಳ ಕಾಲ ನಿತ್ಯ ಕಾಫಿನಾಡಿನಲ್ಲಿ ಹೆಲಿಕಾಪ್ಟರ್ ಸದ್ದು ಮಾಡಲಿದೆ. ಮುಳ್ಳಯ್ಯನಗಿರಿ, ದತ್ತಪೀಠ, ಮೇರುತಿ ಗುಡ್ಡ, ದೇವರಮನೆ ಗುಡ್ಡ, ಎತ್ತಿನಭುಜ, ರಾಣಿ ಝರಿ ಮುಂತಾದ ಪ್ರಮುಖ ಪ್ರವಾಸಿ ತಾಣಗಳನ್ನು ಹೆಲಿಕಾಪ್ಟರ್ ಮೂಲಕ ವೀಕ್ಷಿಸುವ ಸುಯೋಗ ದೊರೆತಿದೆ.

ತುಂಬಿ ಎವೀಯೇಶನ್ ಸಹಭಾಗಿತ್ವದಲ್ಲಿ ಚಿಕ್ಕಮಗಳೂರು ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ 18 ದಿನಗಳ ಕಾಲ ಪ್ರವಾಸ ಪ್ರಿಯರಿಗೆ ಹೆಲಿಕ್ಯಾಪ್ಟರ್ ವ್ಯವಸ್ಥೆ ಕಲ್ಪಿಸಿದೆ. ಚಿಕ್ಕಮಗಳೂರಿನಗ ಮುಳ್ಳಯ್ಯನಗಿರಿ, ದತ್ತಪೀಠ, ಮೂಡಿಗೆರೆ ತಾಲೂಕಿನ ದೇವರಮನೆ ಗುಡ್ಡ, ಎತ್ತಿನ ಭುಜ, ಕಳಸ ತಾಲೂಕಿನ ಮೇರುತಿ ಹಾಗೂ ರಾಣಿ ಝರಿ ಜಲಪಾತದ ಮನಮೋಹಕ ದೃಶ್ಯವನ್ನ ಹೆಲಿಕ್ಯಾಪ್ಟರ್‌ನಲ್ಲಿ ಕಣ್ತುಂಬಿಕೊಳ್ಳಲು ಅವಕಾಶ ಕಲ್ಪಿಸಿದೆ.

ಈ ಅವಕಾಶ ಕೇವಲ 18 ದಿನಗಳ ಕಾಲ ಮಾತ್ರ ಇರಲಿದೆ. ಚಿಕ್ಕಮಗಳೂರು ಪ್ರವಾಸೋದ್ಯಮವನ್ನ ಉತ್ತೇಜಿಸುವ ಸಲುವಾಗಿ ಈ ಯೋಜನೆ ಆರಂಭಗೊಂಡಿದ್ದು,  6 ನಿಮಿಷಕ್ಕೆ 4 ಸಾವಿರ ಹಾಗೂ 12 ನಿಮಿಷಕ್ಕೆ 8 ಸಾವಿರ ನಿಗದಿ ಮಾಡಲಾಗಿದೆ.

ಕಾಫಿನಾಡ ಪ್ರವಾಸೋದ್ಯಮವನ್ನ ಉತ್ತೇಜಿಸುವ ಸಲುವಾಗಿ ಪ್ರವಾಸೋದ್ಯಮ ಇಲಾಖೆ ಹಾಗೂ ಜಿಲ್ಲಾಡಳಿತ ಹೊಸ ಪ್ರಯತ್ನಕ್ಕೆ ಮುಂದಾಗಿದೆ.

ಸರ್ಕಾರದ ಈ ಯೋಜನೆಯನ್ನು ರಾಜ್ಯದ ಪ್ರವಾಸಿ ಪ್ರಿಯರು ಸದುಪಯೋಗಪಡಿಸಿಕೊಳ್ಳಬೇಕೆಂದು ಚಿಕ್ಕಮಗಳೂರು ಜಿಲ್ಲಾಡಳಿತ ಮನವಿ ಮಾಡಿದೆ.

ಡಿಸೆಂಬರ್ 20 ಮತ್ತು  23  ಮೂಡಿಗೆರೆ ತಾಲ್ಲೂಕಿನ ಪ್ರೇಕ್ಷಣೀಯ ಸ್ಥಳಗಳ ವೀಕ್ಷಣೆ ; ಹೆಲಿಪ್ಯಾಡ್ : ಮೂಡಿಗೆರೆ ಪಟ್ಟಣ ಸಮೀಪದ ಬೀಜುವಳ್ಳಿಯಲ್ಲಿರುವ ಮುದ್ರಮನೆ ಸಂಸ್ಥೆಯ “ಮಾನ್ಸಿ ಎಕ್ಲೇವ್ ಹೆಲಿಪ್ಯಾಡ್”

ಡಿಸೆಂಬರ್ 21, 22 ಮತ್ತು  24  ಚಿಕ್ಕಮಗಳೂರು ತಾಲ್ಲೂಕಿನ ಪ್ರೇಕ್ಷಣೀಯ ಸ್ಥಳಗಳ ವೀಕ್ಷಣೆ ; ಹೆಲಿಪ್ಯಾಡ್ : ಚಿಕ್ಕಮಗಳೂರು ಗಾಲ್ಪ್ ಕ್ಲಬ್ ರಸ್ತೆಯಲ್ಲಿ ನಿರ್ಮಿಸಿರುವ ಹೆಲಿಪ್ಯಾಡ್

ಡಿಸೆಂಬರ್ 25  ಕಳಸ ತಾಲ್ಲೂಕಿನ ಪ್ರೇಕ್ಷಣೀಯ ಸ್ಥಳಗಳ ವೀಕ್ಷಣೆ ; ಹೆಲಿಪ್ಯಾಡ್ : ಕಳಸ ಕೆಪಿಎಸ್ ಶಾಲೆ ಆವರಣದಲ್ಲಿ ನಿರ್ಮಿಸಿರುವ ಹೆಲಿಪ್ಯಾಡ್

ಡಿಸೆಂಬರ್ 26 ಜನವರಿ 6 ರವರೆಗೆ ಚಿಕ್ಕಮಗಳೂರು ತಾಲ್ಲೂಕಿನ ಪ್ರೇಕ್ಷಣೀಯ ಸ್ಥಳಗಳ ವೀಕ್ಷಣೆ ; ಹೆಲಿಪ್ಯಾಡ್ : ಚಿಕ್ಕಮಗಳೂರು ಗಾಲ್ಪ್ ಕ್ಲಬ್ ರಸ್ತೆಯಲ್ಲಿ ನಿರ್ಮಿಸಿರುವ ಹೆಲಿಪ್ಯಾಡ್

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ