krishna 1

 

 

ಚಿಕ್ಕಮಗಳೂರು ಜಿಲ್ಲೆ  ಕಡೂರು   ತಾಲೂಕಿನ ಬೀರೂರು ಸಮೀಪದ ಬಾಸೂರು ಕಾವಲಿನ ಕೃಷ್ಣಮೃಗಗಳ ಮೀಸಲು ಸಂರಕ್ಷಿತ ಪ್ರದೇಶದ ಪಕ್ಕದಲ್ಲೇ ನಡೆದ ಮೂರು ಕೃಷ್ಣಮೃಗಗಳ   ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಅರಣ್ಯ ಸಚಿವರು ವರದಿ ಕೇಳಿದ್ದಾರೆ.

ಡಿಸೆಂಬರ್ 23ರಂದು ಎರಡು ಹೆಣ್ಣು ಹಾಗೂ ಒಂದು ಗಂಡು ಕೃಷ್ಣಮೃಗಗಳನ್ನು ಬೇಟೆಯಾಡಲಾಗಿತ್ತು. ಹತ್ಯೆಗೀಡಾದ ಮೂರು ಕೃಷ್ಣಮೃಗಗಳು ಕೇವಲ ಎರಡು ವರ್ಷ ಪ್ರಾಯದವಾಗಿದ್ದವು. ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಏಳು ದಿನದೊಳಗೆ ಘಟನೆಯ ಸಂಪೂರ್ಣ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.

ಈ ಪ್ರಕರಣದಲ್ಲಿ ಅಧಿಕಾರಿಗಳ ನಡೆ ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿತ್ತು. ಪ್ರಕರಣವನ್ನು ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ ಎಂಬ ಗಂಭೀರ ಆರೋಪಗಳು ಪರಿಸರವಾದಿಗಳಿಂದ ಕೇಳಿ ಬಂದಿದ್ದವು.

ಅಧಿಕಾರಿಗಳು ಘಟನೆ ನಡೆದ ದಿನ ಸಂಜೆ 4 ಗಂಟೆಯೊಳಗೆ ತರಾತುರಿಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತ ದೇಹಗಳನ್ನುಹೂತುಹಾಕಿದ್ದರ ಬಗ್ಗೆ ಪರಿಸರವಾದಿಗಳು ತೀವ್ರ ಅನುಮಾನ ಮತ್ತು ಆಕ್ಷೇಪ ವ್ಯಕ್ತಪಡಿಸಿದ್ದರು.

ಅಳಿವಿನಂಚಿನಲ್ಲಿರುವ ಹಾಗೂ ಕೇವಲ ಚಿಕ್ಕಮಗಳೂರು ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮಾತ್ರ ಕಾಣಸಿಗುವ ಅಪರೂಪದ ಕೃಷ್ಣಮೃಗಗಳ ಹತ್ಯೆ  ಬಗ್ಗೆ ಗಂಭೀರವಾಗಿ ತನಿಖೆ ನಡೆಸಬೇಕೆಂದು ಸರ್ಕಾರ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದೆ

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ