ಶಾಮನೂರು ಶಿವಶಂಕರಪ್ಪ ಸಮಾಜದ ಮೇರು ಪರ್ವತ. ಅಜಾತಶತ್ರು. ಸಾರ್ವಜನಿಕ ಬದುಕಿನಲ್ಲಿ ಅವರು ಮಾಡಿದ ಕೆಲಸ ಗಳನ್ನು ಊಹಿಸಲು ಸಾಧ್ಯ ವಿಲ್ಲಎಂದು ಚಿಕ್ಕಮಗಳೂರು ಜಿಲ್ಲಾ ವೀರಶೈವ ಲಿಂಗಾಯತ ಮಹಾಸಭಾ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಮೋಹನ್ ರಾಜಣ್ಣ ಹೇಳಿದರು.
ಅವರು ಇತ್ತೀಚಿಗೆ ಪುಷ್ಪಗಿರಿ ಸಾಂಸ್ಕೃತಿಕ ಪ್ರತಿಷ್ಠಾನ ಗೋಣಿಬೀಡು ಗ್ರಾಮದ ಶ್ರೀ ಪುಷ್ಪಗಿರಿ ಸದನ ದಲ್ಲಿ ಇತ್ತೀಚೆಗೆ ಅಗಲಿದ ಹಿರಿಯ ರಾಜಕಾರಣಿ ಶಾಮನೂರು ಶಿವಶಂಕರಪ್ಪ ಪುಣ್ಯಸ್ಮರಣೆ ಹಾಗೂ ನುಡಿನಮನ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.
ನಿಷ್ಟುರವಾದಿ ನೇರನುಡಿ ಕೊಡುಗೈ ದಾನಿ ಅವರ ಆದರ್ಶಗಳು ಮತ್ತು ಅವರ ಕೆಲಸಗಳನ್ನು ನಾವೆಲ್ಲರೂ ಮುಂದುವರಿಸಿಕೊಂಡು ಹೋಗಬೇಕಾಗಿದೆ. ಸಮಾಜದ ವಿಚಾರದಲ್ಲಿ ಹೇಳುವುದಾದರೆ ಪಕ್ಷಾತೀತವಾಗಿ. ಜಾತ್ಯತೀತ ವಾಗಿ ಕಾರ್ಯನಿರ್ವಹಿಸಿದ ವ್ಯಕ್ತಿ. ವೀರಶೈವ ಲಿಂಗಾಯತ ಸಮಾಜದ ಒಗ್ಗಟ್ಟಿಗಾಗಿ ಶ್ರಮಿಸಿದವರು .
ಕಾರ್ಯಕ್ರಮದ ಅಧ್ಯಕ್ಷ ತೆ ವಹಿಸಿ ಮಾತನಾಡಿದ ಪುಷ್ಪಗಿರಿ ಸಾಂಸ್ಕೃತಿಕ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ತಿ ಉಮಾ ಮೋಹನ್ ದಾವಣಗೆರೆಯಲ್ಲಿ ಬಾಪೂಜಿ ವಿದ್ಯಾ ಸಂಸ್ಥೆಯ ಮೂಲಕ ಶೈಕ್ಷಣಿಕ ಕ್ಷೇತ್ರಕ್ಕೆ ವಿಶೇಷ ಕೊಡುಗೆ ನೀಡಿದ್ದರು. ಹಾಗೂ ವೀರಶೈವ ಲಿಂಗಾಯತ ಸಮಾಜವನ್ನು ಬಲಿಷ್ಠ ವಾಗಿ ಕಟ್ಟಿದ್ದರು. ಎಂದರು.
ಗೌರವ ಟ್ರಸ್ತಿ ಸಿ.ಸಿ.ರಾಜಣ್ಣ. ಪ್ರಸನ್ನ. ಬಾಂಧವ್ಯ. ಗಂಗಾಧರ್. ಮಿಥುನ್ ಕುಮಾರ್. ಡಿಂಪಲ್. ಮುಂತಾದವರು ಇದ್ದರು.



