hebrige

 

 

ಮೂಡಿಗೆರೆ ತಾಲ್ಲೂಕು ಸರ್ಕಾರಿ ಹೊರಗುತ್ತಿಗೆ ನೌಕರರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಪಟ್ಟಣದ ಜೈ ಭೀಮ್ ಹಾಲ್‌ನಲ್ಲಿ ನಡೆಯಿತು.

ಸಮಾರಂಭದಲ್ಲಿ ತಾಲ್ಲೂಕು ಅಧ್ಯಕ್ಷರಾಗಿ ಪೂರ್ಣೇಶ್ ಹೆಬ್ರಿಗೆ ಅವರನ್ನು ಏಕಮತದಿಂದ ಆಯ್ಕೆ ಮಾಡಲಾಯಿತು.

ಉಪಾಧ್ಯಕ್ಷರಾಗಿ ಜೀವಿತ, ಪ್ರಧಾನ ಕಾರ್ಯದರ್ಶಿಯಾಗಿ ದಿನೇಶ್ ಪಲ್ಗುಣಿ, ಕಾರ್ಯದರ್ಶಿಯಾಗಿ ಭಾರ್ಗವಿ, ಸಂಚಾಲಕರಾಗಿ ಅಣ್ಣಪ್ಪ ಹಾಗೂ ಖಜಾಂಚಿಯಾಗಿ ರಾಗಿಣಿ ಅವರನ್ನು ಆಯ್ಕೆ ಮಾಡಲಾಯಿತು. ಜೊತೆಗೆ ವಿವಿಧ ಇಲಾಖೆಗಳ ಹೊರಗುತ್ತಿಗೆ ನೌಕರರನ್ನು ಒಳಗೊಂಡ ಸಲಹಾ ಸಮಿತಿಯನ್ನೂ ರಚಿಸಲಾಯಿತು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ತಾಲ್ಲೂಕು ಅಧ್ಯಕ್ಷ ಪೂರ್ಣೇಶ್ ಹೆಬ್ರಿಗೆ ಮೂಡಿಗೆರೆ ತಾಲ್ಲೂಕಿನ ಎಲ್ಲಾ ಇಲಾಖೆಗಳ ಹೊರಗುತ್ತಿಗೆ ನೌಕರರನ್ನು ಒಂದೇ ವೇದಿಕೆಯಲ್ಲಿ ಸಂಘಟಿಸಿ, ಅವರ ಹಕ್ಕು, ಗೌರವ ಮತ್ತು ಸೇವಾ ಭದ್ರತೆಗಾಗಿ ನಿರಂತರ ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು. ನೌಕರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ದೊರಕುವವರೆಗೆ ಸಂಘದ ಹೋರಾಟ ಮುಂದುವರಿಯಲಿದೆ ಎಂದರು.

ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಅಧ್ಯಕ್ಷ ಮಂಜು, ರಾಜ್ಯ ಸರ್ಕಾರದ ಅಧೀನದಲ್ಲಿರುವ ವಿವಿಧ ಇಲಾಖೆಗಳ ಹೊರಗುತ್ತಿಗೆ ನೌಕರರು ವೇತನ ಅಸಮಾನತೆ, ಸೇವಾ ಭದ್ರತೆ ಹಾಗೂ ಸಾಮಾಜಿಕ ಭದ್ರತೆ ಕೊರತೆಯಿಂದ ತೀವ್ರ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಹೇಳಿದರು. ಈ ಬೇಡಿಕೆಗಳ ಈಡೇರಿಕೆಗೆ ಸಂಘಟಿತ ಹೋರಾಟ ಅಗತ್ಯವಿದ್ದು, ಮುಂದಿನ ದಿನಗಳಲ್ಲಿ ಸರ್ಕಾರದ ವಿರುದ್ಧ ಬಲಿಷ್ಠ ಹೋರಾಟ ನಡೆಸಲಾಗುವುದು ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಪಾಧ್ಯಕ್ಷ ಗಿರೀಶ್, ರಾಜ್ಯ ಕಾರ್ಯದರ್ಶಿ ಮಣಿ, ಜಿಲ್ಲಾ ಕಾರ್ಯದರ್ಶಿ ದರ್ಶನ್, ಜಿಲ್ಲಾ ಸಂಘಟನಾ ಸಂಚಾಲಕ ಪ್ರದೀಪ್, ಜಿಲ್ಲಾ ನಿರ್ದೇಶಕಿ ಶೈಲಾ ಸೇರಿದಂತೆ ತಾಲ್ಲೂಕು ಮಟ್ಟದ ಹಲವು ಪದಾಧಿಕಾರಿಗಳು ಹಾಗೂ ಹೊರಗುತ್ತಿಗೆ ನೌಕರರು ಉಪಸ್ಥಿತರಿದ್ದರು.

ವರದಿ : ತನು ಕೊಟ್ಟಿಗೆಹಾರ

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ