ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ನಡೆದ ಬ್ಯಾನರ್ ಗಲಾಟೆಯಲ್ಲಿ ಕಾಂಗ್ರೆಸ್‌ನ ಕಾರ್ಯಕರ್ತ, ಶಾಸಕ ನಾರಾ ಭರತ್ ರೆಡ್ಡಿ ಬೆಂಬಲಿಗ ರಾಜಶೇಖರ್ ಮೃತಪಟ್ಟಿದ್ದಾರೆ. ಗಲಾಟೆ ವಿಕೋಪದ ಬಳಿಕ ಪೊಲೀಸರು ರೆಡ್ಡಿ ಮನೆಯ ಬಳಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.ಜನವರಿ 3 ರಂದು ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬಳ್ಳಾರಿಯ ಹವಂಬಾವಿ ನಗರದಲ್ಲಿರುವ ಜನಾರ್ದನ ರೆಡ್ಡಿ ಮನೆ ಮುಂಭಾಗ ಬ್ಯಾನರ್ ಅಳವಡಿಕೆ ಮಾಡಲು ಒಂದು ಗುಂಪು ಮುಂದಾಗಿತ್ತು.

ಈ ವೇಳೆ ಬ್ಯಾನರ್ ಹಾಕದಂತೆ ರೆಡ್ಡಿ ಅಪ್ತರು ಅಡ್ಡಿ ಪಡಿಸಿದ್ದಾರೆ. ಈ ವೇಳೆ ಮಾತಿನ ಚಕಮಕಿ ನಡೆದು ಪರಸ್ಪರ ಕಲ್ಲು ತೂರಿದ್ದಾರೆ. ಉದ್ವಿಗ್ನ ವಾತಾವರಣ ನಿರ್ಮಾಣವಾದ ಬೆನ್ನಲ್ಲೇ ಸ್ಥಳಕ್ಕೆ ಮಾಜಿ ಸಚಿವ ಶ್ರೀರಾಮುಲು ) ಆಗಮಿಸಿದ್ದಾರೆ. ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಕೂಡಾ ಘಟನಾ ಸ್ಥಳಕ್ಕೆ ಬಂದಿದ್ದಾರೆ. ಈ ಸಂದರ್ಭದಲ್ಲಿ ಎರಡು ಕಡೆ ಮಾತಿನ ಚಕಮಕಿ ನಡೆದದು ಪೊಲೀಸರು ಲಾಠಿ ಚಾರ್ಜ್ ಮಾಡಿ ಜನರನ್ನು ಚದುರಿಸಿದ್ದಾರೆ.
ಪೊಲೀಸರು ಲಾಠಿ ಚಾರ್ಜ್ ಮಾಡಿದರೂ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಖಾಸಗಿ ಗನ್‌ಮ್ಯಾನ್‌ಗಳು ಫೈರಿಂಗ್ ಮಾಡಿದ್ದಾರೆ. ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಗುಂಡಿನ ದಾಳಿಗೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮೃತಪಟ್ಟಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತನಿಗೆ ಗುಂಡಿನ ಹಾರಿಸಿದರು ಯಾರು ಎನ್ನುವುದು ತಿಳಿದು ಬಂದಿಲ್ಲ.
ನಾರಾ ಭರತ್ ರೆಡ್ಡಿ ಪ್ರತಿಕ್ರಿಯಿಸಿ, ಜನಾರ್ದನ ರೆಡ್ಡಿ ಬೆಂಬಲಿಗರ ಮಾಡಿದ ಗಲಾಟೆಯಲ್ಲಿ ನಮ್ಮ ಕಾರ್ಯಕರ್ತ ಮೃತಪಟ್ಟಿದ್ದಾರೆ. ಹೀಗಾಗಿ ಜನಾರ್ದನ ರೆಡ್ಡಿ ಮತ್ತು ಬೆಂಬಲಿಗರನ್ನು ಕೂಡಲೇ ಬಂಧಿಸಬೇಕು. ವಾಲ್ಮೀಖಿ ಕಾರ್ಯಕ್ರಮವನ್ನು ತಡೆಯಲು ಕಳೆದ 1 ತಿಂಗಳಿನಿಂದ ಇವರು ಬಹಳ ಪ್ರಯತ್ನ ಪಡುತ್ತಿದ್ದರು. ಈಗ ಗಲಾಟೆ ಮಾಡುವ ಮೂಲಕ ಕಾರ್ಯಕ್ರಮ ನಿಲ್ಲಿಸಲು ಮುಂದಾಗಿದ್ದಾರೆ ಎಂದು ಆಕ್ರೋಶ ಹೊರಹಾಕಿದರು



