thanda

 

 

2026ರ ಟಿ20 ವಿಶ್ವಕಪ್‌ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಸೂರ್ಯಕುಮಾರ್ ಯಾದವ್ ನೇತೃತ್ವದಲ್ಲಿ ಭಾರತದ 15 ಆಟಗಾರರ ತಂಡವನ್ನು ಪ್ರಕಟಿಸಲಾಗಿದೆ. ತಂಡದಲ್ಲಿ ಅನುಭವಿ ಮತ್ತು ಯುವ ಆಟಗಾರರ ಸಮ್ಮಿಲನವಿದೆ. ಕಳಪೆ ಫಾರ್ಮ್ ನಡುವೆಯೂ ಸೂರ್ಯಕುಮಾರ್ ಯಾದವ್ ಅವರನ್ನು ನಾಯಕ ಸ್ಥಾನದಲ್ಲಿ ಮುಂದುವರಿಸಲಾಗಿದೆ. ಕಳಪೆ ಫಾರ್ಮ್ ಕಾರಣದಿಂದ ಶುಬ್ಮನ್ ಗಿಲ್ ಅವರನ್ನು ತಂಡದಿಂದ ಕೈಬಿಟ್ಟು, ಅನುಭವಿ ಸಂಜು ಸಾಮ್ಸನ್ ಅವರಿಗೆ ಅವಕಾಶ ನೀಡಲಾಗಿದೆ.

ಪಂದ್ಯಾವಳಿಗೆ ಭಾರತ ಮತ್ತು ಶ್ರೀಲಂಕಾ ಆತಿಥ್ಯ ವಹಿಸಲಿವೆ. ಫೆಬ್ರವರಿ 7 ರಿಂದ ಮಾರ್ಚ್ 8 ರವರೆಗೆ 20 ತಂಡಗಳು ಟಿ 20 ವಿಶ್ವಕಪ್ ಗಾಗಿ ಸ್ಪರ್ಧಿಸಲಿವೆ. ಇದುವರೆಗೆ 6 ದೇಶಗಳ ತಂಡಗಳ ವಿವರಗಳನ್ನು ಪ್ರಕಟಿಸಲಾಗಿದೆ.

20 ತಂಡಗಳ ನಡುವೆ ನಡೆಯಲಿರುವ ಈ ಮಿನಿ ವಿಶ್ವ ಸಮರ ಫೆಬ್ರವರಿ 7 ರಿಂದ ಆರಂಭವಾಗಿ, ಮಾರ್ಚ್​ 8 ರಂದು ನಡೆಯಲಿರುವ ಫೈನಲ್​ ಪಂದ್ಯದೊಂದಿಗೆ ಅಂತ್ಯವಾಗಲಿದೆ.

ಭಾರತ ತಂಡ ಹೀಗಿದೆ : ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್, ಶಿವಂ ದುಬೆ, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರಿಂಕು ಸಿಂಗ್.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ