laxmangowda

 

 

ಮೂಡಿಗೆರೆ ತಾಲ್ಲೂಕು ಬಿ ಹೊಸಹಳ್ಳಿ ಗ್ರಾಮದ ಹಿರಿಯ ಕೃಷಿಕ ಹೆಚ್ ಬಿ ಲಕ್ಷ್ಮಣಗೌಡ (ಬಿಜೆಪಿ ರೈತ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ  ಹೆಚ್ ಎಲ್ ಶರತ್ ಅವರ ತಂದೆ)  ಇಂದು ಶನಿವಾರ ಬೆಳಗ್ಗೆ 6:00 ಗಂಟೆಗೆ ದೈವಾದೀನರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು.

ಲಕ್ಷ್ಮಣಗೌಡರು ಗ್ರಾಮದ ಹಿರಿಯ ಕಾಫಿ ಬೆಳೆಗಾರರಾಗಿದ್ದರು, ಗ್ರಾಮದ ಧಾರ್ಮಿಕ ಮತ್ತು ಸಾರ್ವಜನಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರು. ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಮತ್ತು ಅಪಾರ ಬಂಧುಗಳನ್ನು ಅಗಲಿದ್ದಾರೆ.

ಮೃತರ ಅಂತಿಮ ಸಂಸ್ಕಾರವನ್ನು ಇಂದು ಸಂಜೆ 4:30ಕ್ಕೆ ಸ್ವಗ್ರಾಮ ಬಿ.ಹೊಸಳ್ಳಿಯಲ್ಲಿ ನಡೆಸಲಾಗುವುದೆಂದು ಕುಟುಂಬ ಮೂಲಗಳು ತಿಳಿಸಿವೆ.

ಲಕ್ಷ್ಮಣಗೌಡರ ನಿಧನಕ್ಕೆ ಕರ್ನಾಟಕ ಬೆಳೆಗಾರರ ಒಕ್ಕೂಟ, ತಾಲ್ಲೂಕು ಬೆಳೆಗಾರರ ಸಂಘ, ಬಿ.ಹೊಸಳ್ಳಿ ಕೃಷಿ ಪತ್ತಿನ ಸಹಕಾರ ಸಂಘ, ಬಿಜೆಪಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ