divin

 

 

ಸ್ವಾಮಿ ವಿವೇಕಾನಂದರ ವ್ಯಕ್ತಿತ್ವ ನಿರ್ಮಾಣ ಮತ್ತು ರಾಷ್ಟೋದ್ಧಾರದ ಕನಸನ್ನು ನನಸಾಗಿಸುವಲ್ಲಿ ಕಳೆದ ಸುಮಾರು ಐವತ್ತು ವರ್ಷಗಳಿಂದ ಡಿವೈನ್ ಪಾರ್ಕ್ ಮೂಲಕ ಶ್ರಮಿಸುತ್ತಿದ್ದ ಉಡುಪಿಯ ಸಾಲಿಗ್ರಾಮ ಡಿವೈನ್ ಪಾರ್ಕ್ ಸಂಸ್ಥಾಪಕ ಎ.ಚಂದ್ರಶೇಖರ್ ಉಡುಪ (75) ಹೃದಯಾಘಾತದಿಂದ ಬುಧವಾರ ಬೆಳಗಿನ ಜಾವ ನಿಧನರಾಗಿದ್ದಾರೆ.

ಡಿವೈನ್ ಪಾರ್ಕ್ ಸಂಸ್ಥೆ ಮೂಲಕ ಹಲವು ಸೇವಾ ಚಟುವಟಿಕೆಗಳನ್ನು ನಡೆಸಿಕೊಂಡು ಬಂದ ಇವರು ವೃತ್ತಿಯಲ್ಲಿ ವೈದ್ಯರಾಗಿದ್ದರು. ಎಪ್ಪತ್ತರ ದಶಕದಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿರುವಾಗ ವಿವೇಕಾನಂದರ ಚಿಂತನೆಗಳ ಪ್ರಭಾವಕ್ಕೆ ಒಳಗಾಗಿ ಅನಂತರ ಡಿವೈನ್ ಪಾರ್ಕ್ ಎಂಬ ಸಂಸ್ಥೆಯನ್ನು ಪ್ರಾರಂಭಿಸಿದರು. ಆರೋಗ್ಯ ಮತ್ತು ಅಧ್ಯಾತ್ಮದ ಚಿಂತನೆಯಲ್ಲಿ ಸಮಾಜಕ್ಕೆ ಮತ್ತು ರಾಷ್ಟ್ರಕ್ಕೆ ಒಳಿತು ಮಾಡುವ ನಿಟ್ಟಿನಿಂದ ಪ್ರಾರಂಭಿಸಿ ನಾಡಿಗೆ ಸೇವೆ ಸಲ್ಲಿಸುತ್ತಿದ್ದು ಲಕ್ಷಾಂತರ ಮಂದಿ ದೇಶ-ವಿದೇಶದಲ್ಲಿ ಇವರ ಭಕ್ತರು, ಅನುಯಾಯಿಗಳಿದ್ದಾರೆ ಅವರೆಲ್ಲರೂ ಅಕ್ಕರೆಯಿಂದ ಡಾಕ್ಟರ್‌ಜೀ ಎಂದೇ ಇವರನ್ನು ಕರೆಯುತ್ತಿದ್ದರು.

ಡಿವೈನ್ ಪಾರ್ಕ್‌ನ ಸಹಸಂಸ್ಥೆಯಾಗಿ ಎಸ್‌ಎಚ್‌ಆರ್‌ಎಫ್ (ಯೋಗಬನ) ಸ್ಥಾಪಿಸಿದ ಇವರು. ಯೋಗ, ಪ್ರಕೃತಿ, ಆಯುರ್ವೇದಗಳ ಜತೆಗೆ ಆಧ್ಯಾತ್ಮಿಕ ಚಿಕಿತ್ಸಕ ಕ್ರಮವನ್ನೂ ಮುನ್ನೆಲೆಗೆ ತಂದಿದ್ದರು.

ಮೃತರು ಪುತ್ರ ಡಾ. ವಿವೇಕ ಉಡುಪ ಹಾಗೂ ಸೊಸೆ. ಪತ್ನಿ, ಪುತ್ರಿ ಹಾಗೂ ಅಪಾರ ಅನುಯಾಯಿಗಳನ್ನು ಅಗಲಿದ್ದಾರೆ.

*********************

ಉಡುಪಿಯ ಸಾಲಿಗ್ರಾಮ ಡಿವೈನ್ ಪಾರ್ಕ್ ಇದರ ಸಂಸ್ಥಾಪಕರು, ಪರಮ ಪೂಜ್ಯ ಡಾ. ಎ.ಚಂದ್ರಶೇಖರ್ ಉಡುಪ ಇವರು ದೈವಾಧೀನರಾದ ಸುದ್ದಿ ತಿಳಿದು ಮನಸ್ಸಿಗೆ ಅತ್ಯಂತ ದುಃಖವಾಯಿತು.

ಸಾಲಿಗ್ರಾಮ ಡಿವೈನ್ ಪಾರ್ಕ್ ಮೂಲಕ ಆತ್ಮಶಾಂತಿ, ಧ್ಯಾನ, ಆಧ್ಯಾತ್ಮಿಕ ಜಾಗೃತಿ ಹಾಗೂ ಸಾಮಾಜಿಕ ಸೇವೆಗಳ ವಿಸ್ತಾರಕ್ಕೆ ಶ್ರಮಿಸುತ್ತಾ ಅನೇಕ ಜನರಿಗೆ ಮಾರ್ಗದರ್ಶಕರಾಗಿ, ಸೇವೆ,ಸಂಸ್ಕಾರಗಳ ಮೂಲಕ ಸಮಾಜದಲ್ಲಿ ಸಕಾರಾತ್ಮಕ ಚಿಂತನೆ ಬೆಳೆಸಿದ ಅವರ ಅಗಲಿಕೆ ತುಂಬಲಾರದ ನಷ್ಟ.

ಭಗವಂತ ಅವರ ದಿವ್ಯಾತ್ಮಕ್ಕೆ ಶಾಂತಿಯನ್ನು ಕರುಣಿಸಲಿ. ಅವರ ಲಕ್ಷಾಂತರ ಭಕ್ತ ಸಮೂಹಕ್ಕೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ.

ಸಿ.ಟಿ.ರವಿ, ವಿಧಾನಪರಿಷತ್ ಸದಸ್ಯರು

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ