IMG-20260108-WA0027_copy_1156x623_1

 

 

ಮೂಡಿಗೆರೆ ತಾಲೂಕಿನ ಮುತ್ತಿಗೆಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶೈಕ್ಷಣಿಕ ಸಾಧನೆ ಹಾಗೂ ಸೌಲಭ್ಯಗಳ ಮೂಲಕ ಖಾಸಗಿ ಶಾಲೆಗಳಿಗೆ ಸವಾಲು ಹಾಕುವಂತ ಕಾರ್ಯ ಮಾಡಿ ಜಿಲ್ಲೆಯಾದ್ಯಂತ ಗಮನ ಸೆಳೆದಿದೆ.

ಶಾಲೆಯ ವಿದ್ಯಾರ್ಥಿಗಳು ಬುಧವಾರ ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ ಕೈಗೊಂಡಿದ್ದು, ಸರ್ಕಾರಿ ಶಾಲಾ ಮಕ್ಕಳಿಗೆ ಇದೇ ಮೊದಲ ಬಾರಿಗೆ ವಿಮಾನ ಪ್ರಯಾಣದ ಅವಕಾಶ ದೊರಕಿರುವುದು ವಿಶೇಷವಾಗಿದೆ.

ಈ ಶಾಲೆಯ ವೈಶಿಷ್ಟ್ಯವೇನೆಂದರೆ, ಖಾಸಗಿ ಶಾಲೆಗಳಲ್ಲಿ ದೊರೆಯುವಂತ ಗುಣಮಟ್ಟದ ಶಿಕ್ಷಣ, ಶೈಕ್ಷಣಿಕ ಸೌಲಭ್ಯಗಳು ಮತ್ತು ಸಂಸ್ಕೃತಿಪೂರ್ಣ ವಾತಾವರಣವನ್ನು ಸರ್ಕಾರಿ ಶಾಲೆಯಲ್ಲೇ ಒದಗಿಸಲಾಗುತ್ತಿದೆ. ಇದರಿಂದ ಸಾರ್ವಜನಿಕರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ಜಿಲ್ಲೆಯಲ್ಲಿ ಮೊದಲ ಬಾರಿಗೆ ಸರ್ಕಾರಿ ಶಾಲಾ ಮಕ್ಕಳಿಗೆ ವಿಮಾನದಲ್ಲಿ ಪ್ರಯಾಣಿಸುವ ಅವಕಾಶ ಕಲ್ಪಿಸುವಲ್ಲಿ ಸ್ಥಳೀಯ ಗ್ರಾಮ ಪಂಚಾಯಿತಿ, ಎಸ್‌ಡಿಎಂಸಿ ಸದಸ್ಯರು, ದಾನಿಗಳು ಹಾಗೂ ಶಾಲಾ ಶಿಕ್ಷಕರು ಪ್ರಮುಖ ಪಾತ್ರ ವಹಿಸಿದ್ದಾರೆ. ಅವರ ಸಹಕಾರ ಮತ್ತು ಸಮರ್ಪಿತ ಪ್ರಯತ್ನಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಪ್ರವಾಸಕ್ಕೆ ಹೊರಟಿರುವ ಶಾಲಾ ಮಕ್ಕಳ ಸಂತಸಕ್ಕೆ ಪಾರವೇ ಇರಲಿಲ್ಲ. ವಿಮಾನ ಪ್ರಯಾಣದ ಅನುಭವವು ಮಕ್ಕಳಲ್ಲಿ ಹೊಸ ಉತ್ಸಾಹ, ಆತ್ಮವಿಶ್ವಾಸ ಹಾಗೂ ಭವಿಷ್ಯದ ಕನಸುಗಳನ್ನು ಬೆಳೆಸುವಲ್ಲಿ ಸಹಕಾರಿಯಾಗಲಿದೆ ಎಂದು ಶಿಕ್ಷಕರು ಅಭಿಪ್ರಾಯಪಟ್ಟಿದ್ದಾರೆ.

ಇತ್ತೀಚಿನ ದಿನಗಳಲ್ಲಿ ‘ಸರ್ಕಾರಿ ಶಾಲೆ’ ಎಂದರೆ ಅಸಡ್ಡೆ ಮನೋಭಾವ ಹೊಂದಿರುವವರಿಗೆ ಉತ್ತರವಾಗಿ, ಮುದ್ರೆ ಮನೆ ಕಾಫಿ  ಕ್ಯೂರರ್ಸ್ ಮಾಲಿಕ ಬಿ ಎಸ್ ಸಂತೋಷ್ ಸಹಕಾರದಿಂದ ಸುಸಜ್ಜಿತ ಕಟ್ಟಡವನ್ನು ನಿರ್ಮಿಸಿ ಈ ಶಾಲೆ ಇಡೀ ರಾಜ್ಯವೇ ಹೆಮ್ಮೆಪಡುವಂತ ಮಾದರಿಯಾಗಿ ಹೊರಹೊಮ್ಮಿದೆ.

ಮುತ್ತಿಗೆಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಈ ಸಾಧನೆ ಸರ್ಕಾರಿ ಶಾಲೆಗಳ ಶಕ್ತಿಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.

ಮುತಿಗೆಪುರ ಶಾಲೆಯಿಂದ ವಿಮಾನ ಪ್ರವಾಸಕ್ಕೆ ಹೊರಡುವ ಸಂದರ್ಭದಲ್ಲಿ ಮುಖ್ಯ ಶಿಕ್ಷಕರಾದ ಭಾರತೀ ಹಾಗೂ ಹಳೇಮೂಡಿಗೆರೆ ಗ್ರಾಮ ಪಂಚಾಯ್ತಿ ಅಧ್ಯಕ್ಷರಾದ ಕುಮಾರಿ ರಂಜಿತ, ಉಪಾಧ್ಯಕ್ಷರಾದ ಸೋನಿಯಾ ಕ್ರಾಸ್ತ ಹಳೇಮೂಡಿಗೆರೆ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳದ ವೀಣಾ ಅವರು ಮತ್ತು sdmc ಅಧ್ಯಕ್ಷರು ಸುಧೀರ್ ಅವರು ಹಾಗೂ sdmc ಸದಸ್ಯರಾದ ಸುನಿಲ್ ಕುಮಾರ್ ಹಾಗೆ ರಾಜು ಪೂಜಾರಿ ಮಧು ವಿನ್ಸಿ ವಾಸು ಹಾಗೂ ಸ್ಥಳೀಯ ದಾನಿಗಳಾದ ಮುದ್ರೆಮನೆ ಸಂತೋಷ್ ದಯಾಳ್ ಇನ್ನಿತರರು ಉಪಸ್ಥಿತರಿದ್ದು ಪ್ರವಾಸಕ್ಕೆ ಶುಭ ಕೋರಿದರು.

ವರದಿ -ಪ್ರಕಾಶ್ ಬಕ್ಕಿ

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ