dcc new

 

 

ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (ಡಿಸಿಸಿ) ನಿರ್ದೇಶಕ ಸ್ಥಾನಗಳ ಚುನಾವಣೆಗೆ ಜಿಲ್ಲೆ ಹಾಲಿ ಮತ್ತು ಮಾಜಿ ಶಾಸಕರುಗಳು ಕಣಕ್ಕಿಳಿದಿದ್ದು 13 ನಿರ್ದೇಶಕ ಸ್ಥಾನಗಳಿಗೆ ಒಟ್ಟು 27 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.  ಇಂದು ಭಾನುವಾರ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದು, ಅಂತಿಮವಾಗಿ ಎಷ್ಟು ಮಂದಿ ಕಣದಲ್ಲಿ ಉಳಿಯುತ್ತಾರೆ ಎಂಬುದು ಇಂದು ಸಂಜೆ ವೇಳೆಗೆ ಸ್ಪಷ್ಟವಾಗಲಿದೆ.

ಕಡೂರು ಕಾಂಗ್ರೇಸ್ ಶಾಸಕ ಕೆ.ಎಸ್. ಆನಂದ್, ವಿಧಾನ ಪರಿಷತ್ ಸದಸ್ಯರಾದ ಸಿ.ಟಿ. ರವಿ, ಎಸ್.ಎಲ್. ಬೋಜೇಗೌಡ, ಕಡೂರು ಮಾಜಿ ಶಾಸಕ ಬೆಳ್ಳಿಪ್ರಕಾಶ್, ಮೂಡಿಗೆರೆ ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ, ತರೀಕೆರೆ ಮಾಜಿ ಶಾಸಕ ಡಿ.ಎಸ್. ಸುರೇಶ್ ಕಣಕ್ಕಿಳಿದಿರುವ ಹಾಲಿ ಮತ್ತು ಮಾಜಿ ಶಾಸಕರುಗಳು.

ಚಿಕ್ಕಮಗಳೂರು ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ 2 ಸ್ಥಾನಗಳಿಗೆ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ, ಎಸ್.ಎಲ್.ಭೋಜೇಗೌಡ, ಬಿಜೆಪಿ ಮುಖಂಡ ಎಂ.ಎಸ್. ನಿರಂಜನ್, ಟಿ.ಇ. ಮಂಜುನಾಥ್, ಹಾಲಿ ಡಿಸಿಸಿ ಬ್ಯಾಂಖ್ ಉಪಾಧ್ಯಕ್ಷ ಎಚ್‌.ಬಿ. ಸತೀಶ್ ಸೇರಿ 5 ಜನ ನಾಮಪತ್ರ ಸಲ್ಲಿಸಿದ್ದಾರೆ.

ಕಡೂರು ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ 2 ಸ್ಥಾನಗಳಿಗೆ ಬೆಳ್ಳಿ ಪ್ರಕಾಶ್, ಎಸ್.ವಿ. ಬಸವರಾಜಪ್ಪ ಹಾಗೂ ಎಚ್.ಕೆ. ದರ್ಶನ್ ಸೇರಿ ಮೂವರು ನಾಮಪತ್ರ ಸಲ್ಲಿಸಿದ್ದಾರೆ.

ತರೀಕೆರೆ ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ 2 ಸ್ಥಾನಗಳಿಗೆ ಮಾಜಿ ಶಾಸಕ ಡಿ.ಎಸ್. ಸುರೇಶ್, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕೆ.ಆ‌ರ್. ಆನಂದಪ್ಪ ಸೇರಿ ಇಬ್ಬರು ನಾಮಪತ್ರ ಸಲ್ಲಿಸಿದ್ದಾರೆ.

ಮೂಡಿಗೆರೆ ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಒಂದು ಸ್ಥಾನಕ್ಕೆ ಕಾಫಿ ಬೆಳೆಗಾರರ ಒಕ್ಕೂಟದ (ಕೆಜಿಎಫ್) ಅಧ್ಯಕ್ಷ ಎಚ್.ಬಿ. ಶಿವಣ್ಣ ಹಳಸೆ ನಾಮಪತ್ರ ಸಲ್ಲಿಸಿದ್ದಾರೆ.

ಕೊಪ್ಪ ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಒಂದು ಸ್ಥಾನಕ್ಕೆ ಯು.ಎಸ್. ಪ್ರಜ್ವಲ್, ಕೆ.ಎಸ್. ರವೀಂದ್ರ, ಬಿ.ಎಸ್. ಸತೀಶ್ ಸೇರಿ ಮೂವರು ನಾಮಪತ್ರ ಸಲ್ಲಿಸಿದ್ದಾರೆ.

ಶೃಂಗೇರಿ ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಒಂದು ಸ್ಥಾನಕ್ಕೆ ಎಚ್.ಕೆ. ದಿನೇಶ್ ಹೆಗ್ಡೆ, ಬಿ.ಜಿ. ಪ್ರಸನ್ನ ನಾಮಪತ್ರ ಸಲ್ಲಿಸಿದ್ದಾರೆ. ನರಸಿಂಹರಾಜಪುರ ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ 1 ಸ್ಥಾನಕ್ಕೆ ಕೆ.ಸಿ. ಜಯಪಾಲ್ ನಾಮಪತ್ರ ಸಲ್ಲಿಸಿದ್ದಾರೆ.

ಜಿಲ್ಲೆಯ ಎಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಂದು ಸ್ಥಾನಕ್ಕೆ ಟಿ.ಕೆ. ಜಗದೀಶ್, ಎಸ್.ಡಿ. ಸೋನಾಲ್ ನಾಮಪತ್ರ ಸಲ್ಲಿಸಿದ್ದಾರೆ.

ಜಿಲ್ಲೆಯ ಎಲ್ಲಾ ವ್ಯವಸಾಯೋತ್ಪನ್ನ ಸಹಕಾರ ಸಂಘಗಳ ಒಂದು ಸ್ಥಾನಕ್ಕೆ ಎಚ್‌.ಕೆ. ದಿನೇಶ್ ಹೊಸೂರು, ಕಡೂರು ಶಾಸಕ ಕೆ.ಎಸ್. ಆನಂದ್‌ ನಾಮಪತ್ರ ಸಲ್ಲಿಸಿದ್ದಾರೆ.

ಜಿಲ್ಲೆಯ ಎಲ್ಲಾ ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕುಗಳು, ಪಟ್ಟಣ ಸಹಕಾರ ಬ್ಯಾಂಕ್ ಹಾಗೂ ಉಳಿದ ಎಲ್ಲಾ ಸಹಕಾರ ಸಂಘಗಳ ಒಂದು ಸ್ಥಾನಕ್ಕೆ ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ, ಟಿ.ಎಲ್. ರಮೇಶ್, ಪಿ. ಮಂಜುನಾಥ್ ಜೋಶಿ, ಈ.ಆರ್. ಮಹೇಶ್‌, ಎಸ್‌.ಬಿ. ಆನಂದಪ್ಪ, ಎಂ. ಮಹೇಶ್ ಸೇರಿ 6 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ಇವತ್ತು ಜನವರಿ 11 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಜ. 17ರಂದು ಬೆಳಗ್ಗೆ 9ರಿಂದ ಸಂಜೆ 4 ಗಂಟೆ ತನಕ ಮತದಾನ ನಡೆಯಲಿದೆ. ಬಳಿಕ ಅದೇ ದಿನ ಮತ ಎಣಿಕೆ ನಡೆಯಲಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ