hangaravalli 5

 

 

ಚಿಕ್ಕಮಗಳೂರು ತಾಲ್ಲೂಕಿನ ಆಲ್ದೂರು ಸಮೀಪದ ಹಂಗರವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯು ಯಶಸ್ವಿ ಮಾದರಿ ಶಾಲೆಗಳ ಉತ್ತಮ ಸಾಧನೆಗಾಗಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದೆ.

ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಎಜುಕೇಶನ್ ಪ್ಲಾನಿಂಗ್ ಅಂಡ್ ಅಡ್ಮಿನಿಸ್ಟ್ರೇಷನ್ (NIEPA) ನಡೆಸುವ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ‘ಯಶಸ್ವಿ ಶಾಲಾ ನಾಯಕತ್ವ ರಾಷ್ಟ್ರೀಯ  ಸಮಾವೇಶ’ಕ್ಕೆ ಮಾದರಿ ಶಾಲೆಯ ಅತ್ಯುತ್ತಮ ಅಭ್ಯಾಸಗಳ ಅಡಿ ಆಯ್ಕೆಯಾಗಿದೆ.

ಸಮಾವೇಶದಲ್ಲಿ ಶಾಲೆಯ ಯಶೋಗಾಥೆ ಬಗ್ಗೆ ಪ್ರಾತ್ಯಕ್ಷಿಕೆ ನೀಡಲಾಗುತ್ತದೆ.  ರಾಜ್ಯದಿಂದ ಸರ್ಕಾರಿ ಪ್ರೌಢಶಾಲೆ ಹೂದಲಮನೆ, ಸಿದ್ದಾಪುರ ತಾಲ್ಲೂಕು, ಉತ್ತರ ಕನ್ನಡ ಜಿಲ್ಲೆ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಂಗರವಳ್ಳಿ, ಚಿಕ್ಕಮಗಳೂರು ಆಯ್ಕೆಗೊಂಡಿವೆ.  ಶಾಲೆಯ ಮುಖ್ಯೋಪಾಧ್ಯಾಯರು ಈ ಸಮಾವೇಶದಲ್ಲಿ ಭಾಗವಹಿಸಿ ಶಾಲೆಯ ಯಶೋಗಾಥೆ ಕುರಿತು 15 ನಿಮಿಷಗಳ  ಪ್ರಾತ್ಯಕ್ಷಿಕೆ ನೀಡಲಿದ್ದಾರೆ.

75 ವರ್ಷಗಳ ಇತಿಹಾಸವಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಹಂಗರವಳ್ಳಿಯು, 1951ರಲ್ಲಿ ಕೂಲಿಮಠ ಹೆಸರಿನಲ್ಲಿ ಪ್ರಾರಂಭಗೊಂಡು ಸಾವಿರಾರು ವಿದ್ಯಾರ್ಥಿಗಳಿಗೆ ಜ್ಞಾನದೇಗುಲವಾಗಿತ್ತು.  ಕ್ರಮೇಣ  ಖಾಸಗಿ ಕಾನ್ವೆಂಟ್ ಶಾಲೆಗಳ ಹೊಡೆತಕ್ಕೆ ಸಿಲುಕಿ 2018ರ ವೇಳೆಗೆ ಕೇವಲ 13 ಮಕ್ಕಳ ದಾಖಲಾತಿಯೊಂದಿಗೆ ಮುಚ್ಚುವ ಹಂತ ತಲುಪಿತ್ತು.
ಈ ಶಾಲೆಯಲ್ಲಿ ಕಲಿತ ಹಳೆಯ ವಿದ್ಯಾರ್ಥಿಗಳು, ಗ್ರಾಮಸ್ಥರು ಶಾಲೆಯನ್ನು ಉಳಿಸಲು ಪಣತೊಟ್ಟು, ‘ಶ್ರೀ ಉದ್ದಂಡೇಶ್ವರ ಶಿಕ್ಷಣ ಸೇವಾ ಟ್ರಸ್ಟ್’ ಸ್ಥಾಪಿಸಿ ಸರ್ಕಾರಿ ಶಾಲೆಯಲ್ಲಿಯೇ ಸರ್ಕಾರದ ಅನುಮತಿಯೊಂದಿಗೆ ಎಲ್.ಕೆ.ಜಿ, ಯು.ಕೆ.ಜಿ ಶಿಕ್ಷಣ ಆರಂಭಿಸಿ ಕ್ರಮೇಣ ದ್ವಿಭಾಷಾ ಮಾಧ್ಯಮದಲ್ಲಿ ಬೋಧನೆ ಆರಂಭಿಸಲಾಯಿತು.

ಖಾಸಗಿ ಶಿಕ್ಷಕರನ್ನು ಈ ಶಾಲೆಗೆ ನೇಮಿಸಿ ಟ್ರಸ್ಟ್ ಮೂಲಕ ವೇತನ ನೀಡಲಾಯಿತು. ವಿದ್ಯಾರ್ಥಿಗಳ ಪ್ರಯಾಣಕ್ಕಾಗಿ ದಾನಿಗಳ ನೆರವಿನಿಂದ 2 ಬಸ್ ವ್ಯವಸ್ಥೆ ಕಲ್ಪಿಸಲಾಯಿತು. ಸರ್ಕಾರ ನೀಡುವ ಸಮವಸ್ತ್ರ ದ ಜೊತೆಗೆ ಹೆಚ್ಚುವರಿಯಾಗಿ ಸಮವಸ್ತ್ರ, ಶೂ, ಸಾಕ್ಸ್ ಹಾಗೂ ನೋಟ್‌ಬುಕ್ ಮತ್ತು ಲೇಖನ ಸಾಮಗ್ರಿಗಳನ್ನು ಟ್ರಸ್ಟ್ ಮೂಲಕ ನೀಡಲಾಗುತ್ತಿದೆ. ಅಳಿವಿನಂಚಿನಲ್ಲಿದ್ದ ಶಾಲೆಯಲ್ಲಿ ಪ್ರಸಕ್ತ ವರ್ಷ 265 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.  ಸರ್ಕಾರದ ವಿವಿಧ ಇಲಾಖೆಗಳಿಂದ ರೂ.4 ಕೋಟಿ ಮೊತ್ತದ ನೆರವನ್ನು ಪಡೆದು 3 ಅಂತಸ್ತಿನ ನೂತನ ಕಟ್ಟಡ ನಿರ್ಮಾಣ ಕಾರ್ಯ ಮುಕ್ತಾಯದ ಹಂತದಲ್ಲಿದೆ.

ವಿಶಾಲವಾದ ಬೋಧನಾ ಕೊಠಡಿಗಳು, ಸುಸಜ್ಜಿತ ಗ್ರಂಥಾಲಯ, ವಿಜ್ಞಾನ ಪ್ರಯೋಗಾಲಯ, 500 ಆಸನವುಳ್ಳ ಆಡಿಟೋರಿಯಂ, ಬಾಲಕ/ಬಾಲಕಿಯರಿಗೆ ಪ್ರತ್ಯೇಕ ಶೌಚಾಲಯ, ಶಿಕ್ಷಕರಿಗೆ ಪ್ರತ್ಯೇಕ ಕೊಠಡಿಗಳಿವೆ.

60 ಸಿ.ಸಿ.ಕ್ಯಾಮೆರಾಗಳನ್ನು ದಾನಿಗಳೊಬ್ಬರು ಅಳವಡಿಸಿಕೊಟ್ಟಿದ್ದಾರೆ.  ಸರ್ಕಾರಿ, ಅತಿಥಿ ಹಾಗೂ ಹೊರಸಂಪನ್ಮೂಲದ ಮೂಲಕ 13 ಶಿಕ್ಷಕರಿದ್ದಾರೆ.  ಗುಣಮಟ್ಟದ ಶಿಕ್ಷಣದ ಪರಿಣಾಮ ಕಾನ್ವೆಂಟ್ ಶಾಲೆ ವಿದ್ಯಾರ್ಥಿಗಳು ಇತ್ತ ಮುಖ ಮಾಡಿದ್ದಾರೆ  .

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ