raitha mahile 3

 

 

ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಬಲಿಯಾಗಿರುವ ಘಟನೆ ಸಕಲೇಶಪುರ ತಾಲೂಕಿನಲ್ಲಿ ನಡೆದಿದೆ ಸಕಲೇಶಪುರ ತಾಲೂಕಿನ ಮೂಗಲಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ರೈತ ಮಹಿಳೆ ಬಲಿಯಾಗಿದ್ದಾರೆ. ಮೂಗಲಿ ಗ್ರಾಮದ ಶೋಭಾ (40 ವರ್ಷ) ಮೃತ ಮಹಿಳೆಯಾಗಿದ್ದು, ಬೆಳಗ್ಗೆ ತನ್ನ ತಾಯಿಯೊಂದಿಗೆ ತೋಟಕ್ಕೆ ತೆರಳುತ್ತಿದ್ದ ಶೋಭಾ ಅವರ ಮೇಲೆ ಕಾಡಾನೆ ದಾಳಿ ಮಾಡಿದ್ದು ಆನೆಯ ತುಳಿತಕ್ಕೆ ಆಕೆ ಬಲಿಯಾಗಿದ್ದಾರೆ

ಮೃತ ಮಹಿಳೆ ಶೋಭಾ ಅವರು ಸ್ವತಃ ಕಾಫಿ ಬೆಳೆಗಾರರಾಗಿದ್ದು ಅವರ ತಾಯಿ ರಾಜಮ್ಮ ಅವರ ಜೊತೆ  ತೋಟಕ್ಕೆ ನಡೆದುಕೊಂಡು ಹೋಗುತ್ತಿದ್ದಾಗ ದಾರಿಯಲ್ಲಿ ಅಡ್ಡಬಂದ ಕಾಡಾನೆ ದಾಳಿ ಮಾಡಿದೆ. ಆಗ ರಾಜಮ್ಮ ಅವರು ಓಡಿ ಬಚಾವಾಗಿದ್ದು ಶೋಭಾ ಅವರು ತಪ್ಪಿಸಿಕೊ‍ಳ್ಳಲು ಸಾಧ್ಯವಾಗದೇ ಆನೆ ತುಳಿತಕ್ಕೆ ಬಲಿಯಾಗಿದ್ದಾರೆ. ಇಂದು ಬೆಳಗ್ಗೆ ಕಾಫಿ ತೋಟದಲ್ಲಿ ಸುಣ್ಣ ಹಾಕುವ ಕೆಲಸಕ್ಕೆ ಶೋಭ ತೆರಳಿದ್ದರು. ಈ ವೇಳೆ ಏಕಾಏಕಿ ದಾಳಿ ನಡೆಸಿದ ಕಾಡಾನೆ, ಮಹಿಳೆಯನ್ನು ತುಳಿದು ಕೊಂದಿದೆ.

ಇತ್ತೀಚೆಗೆ ಕೊಡಗು ಭಾಗದಿಂದ ಬಂದಿರುವ ದೈತ್ಯ ಕಾಡಾನೆಯೊಂದು ಈ ದಾಳಿ ನಡೆಸಿದೆ ಎಂದು ಶಂಕಿಸಲಾಗಿದೆ.

ಕೆಲ ಸಮಯದಿಂದ ಈ ಭಾಗದಲ್ಲಿ ಕಾಡಾನೆ ದಾಳಿಯಿಂದ ಜನರು ಸಾವನ್ನಪ್ಪುವುದು ಕಡಿಮೆಯಾಗಿತ್ತು. ಆದರೆ ಇದೀಗ ಮತ್ತೆ ಕಾಡಾನೆ ದಾಳಿಗೆ ಅಮೂಲ್ಯ ಜೀವವೊಂದು ಬಲಿಯಾಗಿದೆ. ಇದರಿಂದ ಈ ಭಾಗದ ಜನರ ಆಕ್ರೋಶ ಭುಗಿಲೆದ್ದಿದ್ದು, ಅರಣ್ಯ ಇಲಾಖೆಯ ವಿರುದ್ಧ ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಮೃತದೇಹವನ್ನು ಸ್ಥಳದಲ್ಲೇ ಇಟ್ಟು ಧರಣಿ ನಡೆಸಿದರು. ಅರಣ್ಯಾಧಿಕಾರಿಗಳ ನಿರ್ಲಕ್ಷ್ಯವೇ ಈ ದುರ್ಘಟನೆಗೆ ಕಾರಣ ಎಂದು ಆರೋಪಿಸಿದರು.

ಕಾಡಾನೆಗಳ ಸಂಚಾರದ ಬಗ್ಗೆ ಮುಂಚಿತವಾಗಿಯೇ ಜನರಿಗೆ ಮಾಹಿತಿ ನೀಡುತ್ತಿಲ್ಲ. ಪುಂಡಾನೆಗಳನ್ನು ಸೆರೆಹಿಡಿಯುತ್ತಿಲ್ಲ ಹಾಗೂ ರೆಡಿಯೋ ಕಾಲರ್ ಅಳವಡಿಸದೆ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಘಟನೆಯ ಬಗ್ಗೆ ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ತಕ್ಷಣ ಆನೆಯನ್ನು ಕಾಡಿಗಟ್ಟುವ ಅಥವಾ  ಅಗತ್ಯಬಿದ್ದರೆ ಆನೆಯನ್ನು ಸೆರೆಹಿಡಿಯಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ