suddi-1

 

 

ಸಾರ್ವಜನಿಕರು ಹಾಗೂ ವಾಹನ ಚಾಲಕರು ಸಂಚಾರಿ ನಿಯಮಗಳನ್ನು ಪಾಲಿಸುವ ಮೂಲಕ ಇಲಾಖೆಯೊಂದಿಗೆ ಸಹಕರಿಸಬೇಕೆಂದು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಮನವಿ ಮಾಡಿದರು.

ಅವರು ನಗರದ ಹನುಮಂತಪ್ಪ ವೃತ್ತದಲ್ಲಿ ಜಿಲ್ಲಾ ಕೃಷಿ ಪರಿಕರಗಳ ಮಾರಾಟಗಾರರ ಸಂಘದ ವತಿಯಿಂದ ಸುಮಾರು 1 ಲಕ್ಷ ರೂ ವೆಚ್ಚದಲ್ಲಿ ನೀಡಲಾದ ಪೊಲೀಸ್ ಚೌಕಿಯನ್ನು ಉದ್ಘಾಟಿಸಿ ಮಾತನಾಡಿದರು.

ವಾಹನ ಚಾಲನೆ ಮಾಡುವಾಗ ಮೊಬೈಲ್ ಬಳಕೆ, ಮದ್ಯಪಾನ ಸೇವನೆ ಕಡ್ಡಾಯವಾಗಿ ನಿಷೇಧಿಸಲಾಗಿದ್ದು, ಜೀವ ತುಂಬಾ ಅಮೂಲ್ಯವಾಗಿದ್ದು, ಕುಟುಂಬದವರ ಬಗ್ಗೆ ಕಾಳಜಿ ವಹಿಸಿ ಚಾಲನೆ ಮಾಡುವಾಗ ಪೊಲೀಸ್ ಇಲಾಖೆಯ ಸಂಚಾರಿ ನಿಯಮಗಳನ್ನು ತಪ್ಪದೆ ಪಾಲಿಸಬೇಕೆಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕೃಷಿ ಪರಿಕರಗಳ ಮಾರಾಟಗಾರರ ಸಂಘದ ಅಧ್ಯಕ್ಷ ಯೋಗೀಶ್ ಮಾತನಾಡಿ, ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಕಾಫಿ ಬೆಳೆಗಾರರು ಮತ್ತು ರೈತರಿಗೆ ಅಗತ್ಯ ಇರುವ ಉತ್ತಮ ಕೃಷಿ ಪರಿಕರ, ರಸಗೊಬ್ಬರ, ಬಿತ್ತನೆ ಬೀಜ, ಕ್ರಿಮಿನಾಶಕಗಳನ್ನು ಸೂಕ್ತ ಸಮಯಕ್ಕೆ ಸರಬರಾಜು ಮಾಡಲಾಗುತ್ತದೆ ಎಂದು ತಿಳಿಸಿದರು.

ರೈತರಿಗೆ ಉಪಯುಕ್ತವಾದ ಗುಣಮಟ್ಟದ ಪರಿಕರಗಳನ್ನು ಹಾಗೂ ಬೀಜ, ರಸಗೊಬ್ಬರ, ಕ್ರಿಮಿನಾಶಕಗಳನ್ನು ಕಾಲಕ್ಕೆ ತಕ್ಕಂತೆ ಸೂಕ್ತ ಬೆಲೆಗೆ ಪೂರೈಸಲಾಗುತ್ತಿದ್ದು, ಈ ನಿಟ್ಟಿನಲ್ಲಿ ತಾಲ್ಲೂಕಿನ ಎಲ್ಲಾ ಕೃಷಿ ಪರಿಕರ ಸಂಘಗಳು ಕ್ರಿಯಾಶೀಲವಾಗಿ ಕರ್ತವ್ಯ ನಿರ್ವಹಿಸುತ್ತಿದೆ ಎಂದರು.

ಜಿಲ್ಲೆಯಲ್ಲಿ ರೈತ ಪರ ಜನಪರ ಕೆಲಸಗಳನ್ನು ಕೃಷಿ ಇಲಾಖೆ ಸಹಯೋಗದೊಂದಿಗೆ ಸಂಘವು ಯಶಸ್ವಿಯಾಗಿ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ರೈತರನ್ನು ತಲುಪಲು ನಿರ್ಧರಿಸಲಾಗಿದೆ ಎಂದು ಭರವಸೆ ನೀಡಿದರು.

ಕೃಷಿ ಇಲಾಖೆಯ ಸಹಾಯಕ ನಿರ್ದೇಶ ವೆಂಕಟೇಶ್ ಚೌಹಾಣ್ ಮಾತನಾಡಿ, ಕೇವಲ ಕೃಷಿ ಪರಿಕರ ಮಾರಾಟಗಾರರು ರೈತರ ಪರವಾಗಿರುವ ಜೊತೆಗೆ ಇತರೆ ಸಾರ್ವಜನಿಕರ ಸೇವೆಗೂ ಆಸಕ್ತಿ ವಹಿಸಿದ್ದಾರೆಂಬುದಕ್ಕೆ ಈ ಪೊಲೀಸ್ ಚೌಕಿಯನ್ನು ಕೊಡುಗೆಯಾಗಿ ನೀಡಿದ್ದಾರೆಂದು ಶ್ಲಾಘಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಉದಯ್ ಪೈ, ಟಿ.ಡಿ. ತಿಮ್ಮಯ್ಯ, ಪ್ರಧಾನ ಕಾರ್ಯದರ್ಶಿ ಮನು, ಶ್ರೀಕಾಂತ್ ಶೆಟ್ಟಿ, ನಿರ್ದೇಶಕರಾದ ಪ್ರಹಾಲಿ ಮೋಹನ್, ಲವಕುಮಾರ್, ಆನಂದ್, ಶ್ರೀನಿವಾಸ್, ಪರಮೇಶ್ವರಪ್ಪ, ಕೆ.ಪಿ. ಶಿಲ್ಪ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ