suddi-22

 

 

ಅಖಿಲ ಭಾರತ ವೀರಶೈವ ಮಹಾಸಭಾದ ಮಾಜಿ ಅಧ್ಯಕ್ಷ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಮಾಜಿ ಸಚಿವ ಶತಾಯುಷಿ ಭೀಮಣ್ಣ ಖಂಡ್ರೆ ಅಗಲಿಕೆಗೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ.

ಶ್ರೀ ಜಗದ್ಗುರುಗಳು ಭಾಲ್ಕಿಯ ಖಂಡ್ರೆ ಅವರ ನಿವಾಸಕ್ಕೆ ಆಗಮಿಸಿ ಪಾರ್ಥಿವ ಲಿಂಗ ಶರೀರಕ್ಕೆ ಪುಷ್ಪ ಗುಚ್ಛವನ್ನಿರಿರಿಸಿ ಶ್ರದ್ಧಾಂಜಲಿ ಸಲ್ಲಿಸಿದ ನಂತರ ಮಾತನಾಡಿ  ಭಾಲ್ಕಿ ತಾಲೂಕ ಪುರಸಭೆ ಅಧ್ಯಕ್ಷರಾಗಿ,   ಶಾಸಕರಾಗಿ, ವಿಧಾನ ಪರಿಷತ್ ಸದಸ್ಯರಾಗಿ, ಸಾರಿಗೆ ಸಚಿವರಾಗಿ ಕಾರ್ಯ ನಿರ್ವಹಿಸಿದ್ದ ಅವರು ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದರು.

ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾಗಿ ವೀರಶೈವ ಸಮಾಜವನ್ನು ಸಂಘಟಿಸುವ ನಿಟ್ಟಿನಲ್ಲಿ ಸಾರ್ಥಕ ಸೇವೆ ಸಲ್ಲಿಸಿದ್ದನ್ನು ಮರೆಯುವಂತಿಲ್ಲ. ತಮ್ಮ ಹಲವಾರು ಕಾರ್ಯಕ್ರಮಗಳಲ್ಲಿ ಭೀಮಣ್ಣ ಖಂಡ್ರೆಯವರು ಭಾಗವಹಿಸಿದ ನೆನಪು ಹಸಿರಾಗಿದೆ. ಸದಾ ಕಾಲ ಸರ್ವರಿಗೂ ಹಿತವನ್ನು ಬಯಸುತ್ತಿದ್ದ ಅವರು ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿದ್ದರು. ಇಂತಹ ಹಿರಿಯ ಜೀವ ಅಗಲಿರುವುದು ಸಮಾಜಕ್ಕೆ ದೊಡ್ಡ ನಷ್ಟವನ್ನುಂಟು ಮಾಡಿದೆ.

ಕಳೆದ ಎರಡು ದಿನಗಳ ಹಿಂದೆ ಭಾಲ್ಕಿಯ ಅವರ ಸ್ವಗೃಹದಲ್ಲಿ ಅವರ ಆರೋಗ್ಯವನ್ನು ವಿಚಾರಿಸಿ ಬಂದಿದ್ದೆವು. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿತ್ತು. ಆದರೆ ವಿಧಿಯಾಟವೇ ಬೇರೆ ಆಗಿದೆ. ಭೀಮಣ್ಣ ಖಂಡ್ರೆ ಅವರ ಪವಿತ್ರ ಆತ್ಮಕ್ಕೆ ದಯಾಘನನಾದ ಪರಮಾತ್ಮನು ಚಿರಶಾಂತಿ ಅನುಗ್ರಹಿಸಲಿ ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗಕ್ಕೆ ನೀಡಲಿ ಎಂದು ಶ್ರೀ ರಂಭಾಪುರಿ ಜಗದ್ಗುರುಗಳು ತಿಳಿಸಿದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ