nithin nabhi

 

 

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಆಯ್ಕೆಯಾಗಿದ್ದಾರೆ. ಕೇವಲ 45 ವರ್ಷಕ್ಕೆ ಪಕ್ಷಕ್ಕೆ ಮುನ್ನಡೆಸುವ ಜವಾಬ್ದಾರಿ ನೀಡಲಾಗಿದೆ. ಅಧ್ಯಕ್ಷ ಸ್ಥಾನಕ್ಕೆ  ನಿತಿನ್ ನಬಿನ್ ಒಬ್ಬರೇ ನಾಮಪತ್ರ ಸಲ್ಲಿಕೆ ಮಾಡಿದ್ದು, ಪ್ರಧಾನಿ ಮೋದಿ), ಅಮಿತ್ ಶಾ, ನಡ್ಡಾ ಸೇರಿದಂತೆ ಎಲ್ಲ ನಾಯಕರು ಅನುಮೋದಿಸಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ ಮತ್ತು ಚುನಾವಣಾಧಿಕಾರಿ ಕೆ. ಲಕ್ಷ್ಮಣ್ ಅವರು ಸೋಮವಾರ ಪ್ರಕಟಿಸಿದ್ದಾರೆ.

ಇತ್ತೀಚಿಗಷ್ಟೇ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಬಿಹಾರ ಬಿಜೆಪಿ ಶಾಸಕ ನಿತಿನ್ ನಬಿನ್ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹುದ್ದೆಗೆ ಇಂದು ಮಧ್ಯಾಹ್ನ ನಾಮಪತ್ರ ಸಲ್ಲಿಸಿದ್ದರು.

ಇಂದು (ಮಂಗಳವಾರ) ಬೆಳಗ್ಗೆ 11:30ಕ್ಕೆ ನಿತಿನ್ ನಬಿನ್ ಅಧಿಕಾರ ಸ್ವೀಕರಿಸಲಿದ್ದಾರೆ. ಸಂಘಟನಾ ಪರ್ವ ಹೆಸರಿನಲ್ಲಿ ನಡೆಯುತ್ತಿರುವ ಈ ಬದಲಾವಣೆಗೆ ಬಿಜೆಪಿ ಸಿಎಂಗಳು, ರಾಜ್ಯಾಧ್ಯಕ್ಷರು, ಹಿರಿಯ ನಾಯಕರು ಕೂಡ ಸಾಕ್ಷಿಯಾಗಲಿದ್ದಾರೆ.

ಬಿಹಾರ ಬಿಜೆಪಿಯ ಹಿರಿಯ ನಾಯಕ, ಪಾಟ್ನಾದಿಂದ 4 ಬಾರಿ ಎಂಎಲ್‌ಎ ಆಗಿದ್ದ ದಿವಂಗತ ನಬಿನ್ ಕಿಶೋರ್ ಪ್ರಸಾದ್ ಸಿಂಹ ಅವರ ಮಗನಾಗಿರುವ ನಿತಿನ್, ತಂದೆಯ ನಿಧನದ ಬಳಿಕ ಬಿಹಾರದ ಬಿಜೆಪಿಯಲ್ಲಿ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ತಮ್ಮ ತಂದೆಯ ಅಕಾಲಿಕ ನಿಧನದ ನಂತರ ರಾಜಕೀಯ ಹೊಣೆಗಾರಿಕೆ ಅವರ ಮೇಲೆ ಬಿತ್ತು. ಇದನ್ನು ಸವಾಲಾಗಿ ಸ್ವೀಕರಿಸಿದ ನಿತಿನ್ ನಬಿನ್ ಸಕ್ರಿಯ ರಾಜಕೀಯಕ್ಕೆ ಕಾಲಿಟ್ಟರು.

2006ರಲ್ಲಿ  ಕೇವಲ 26 ವರ್ಷಕ್ಕೆ ಬಿಹಾರದ ಶಾಸಕರಾಗಿ ಆಯ್ಕೆಯಾಗಿದ್ದರು. ತಂದೆಯವರ ನಿಧನದ ನಂತರ ನಬಿನ್ 2006 ರಲ್ಲಿ ಪಾಟ್ನಾ ಪಶ್ಚಿಮದಿಂದ ನಡೆದ ಉಪಚುನಾವಣೆಯಲ್ಲಿ ಗೆದ್ದು ವಿಧಾನಸಭೆಯ ಸದಸ್ಯರಾದರು.

ಕ್ಷೇತ್ರ ಪುನರ್ವಿಂಗಡಣೆಯ ನಂತರ, ಅವರು ಬಂಕಿಪುರ ಕ್ಷೇತ್ರವನ್ನು ಪ್ರತಿನಿಧಿಸಲು ಪ್ರಾರಂಭಿಸಿದರು. ಅವರು ಬಂಕಿಪುರ ಕ್ಷೇತ್ರದಿಂದ 2010, 2015, 2020 ಮತ್ತು 2025 ರ ಬಿಹಾರ ವಿಧಾನಸಭೆ ಚುನಾವಣೆಗಳಲ್ಲಿ ಆಯ್ಕೆಯಾಗಿದ್ದಾರೆ.

ಪ್ರಸ್ತುತ ಬಿಹಾರದ ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ರಸ್ತೆ ನಿರ್ಮಾಣ ಮತ್ತು ನಗರಾಭಿವೃದ್ಧಿ ಖಾತೆಗಳನ್ನು ಹೊಂದಿದ್ದರು. ನಂತರ ಬಿಜೆಪಿಯ ಕಾರ್ಯಕಾರಿ ಅಧ್ಯಕ್ಷರಾಗಿ ನೇಮಕಗೊಂಡ ನಂತರ ಆ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಬಿಹಾರದಲ್ಲಿ ಜೆಡಿಯು ಜೊತೆಗಿನ ಬಿಜೆಪಿಯ ಮೈತ್ರಿಯನ್ನು ಕಾಯ್ದುಕೊಳ್ಳುವಲ್ಲಿಯೂ ನಿತಿನ್ ಬಹಳ ಮುಖ್ಯ ಪಾತ್ರ ವಹಿಸಿದ್ದಾರೆ.   ನಿತಿನ್ ನಬಿನ್ ಛತ್ತೀಸ್‌ಗಢದ ಬಿಜೆಪಿಯ ಉಸ್ತುವಾರಿಯಾಗಿ ಸೇವೆ ಸಲ್ಲಿಸಿದ್ದಾರೆ.

ಆರ್‌ಎಸ್‌ಎಸ್ ಜೊತೆಗೂ ಅವಿನಾಭಾವ ಸಂಬಂಧ ಹೊಂದಿರುವ ನಬಿನ್, ಸಂಘಟನಾ ಚತುರ ಅಂತಲೇ ಗುರುತಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ