suddi3

 

 

ಚಿಕ್ಕಮಗಳೂರು ಜಿಲ್ಲಾ ಕೃಷಿ ಪರಿಕರಗಳ ಮಾರಾಟ ಸಂಘದ ವತಿಯಿಂದ ಜಿಲ್ಲೆಯಲ್ಲಿ ಸೌಹಾರ್ಧ ಬ್ಯಾಂಕ್ ಸ್ಥಾಪನೆ ಮಾಡಲು ಅಗತ್ಯವಾಗಿ ಬೇಕಾದ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಸಂಘದ ರಾಜ್ಯಾಧ್ಯಕ್ಷ ಬಸವನಗೌಡ ಮಾಲಿ ಪಾಟೀಲ್ ಭರವಸೆ ನೀಡಿದರು.

ಅವರು ಮಂಗಳವಾರ ಎಐಟಿ ಕಾಲೇಜು ವೃತ್ತದಲ್ಲಿ ಇರುವ ಒಕ್ಕಲಿಗರ ಸಮುದಾಯ ಭವನದಲ್ಲಿ ಜಿಲ್ಲಾ ಕೃಷಿ ಪರಿಕರಗಳ ಮಾರಾಟಗಾರರ ಸಂಘ ಏರ್ಪಡಿಸಿದ್ದ 2024-25ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಮುಂದಿನ ದಿನಗಳಲ್ಲಿ ರೈತರಿಗೆ ಕೃಷಿ ಇಲಾಖೆ ಸಹಯೋಗದಲ್ಲಿ ದೊರೆಯುವ ಹಲವಾರು ಸಾಮಾಜಿಕ ಕಾರ್ಯಗಳ ಜೊತೆಗೆ ಲಭ್ಯವಿರುವ ಸೌಲಭ್ಯಗಳನ್ನು ಒದಗಿಸಲು ಬದ್ಧವಾಗಿರುವುದಾಗಿ ಅವರು ಹೇಳಿದರು.

ವಿದ್ಯಾರ್ಥಿ ಯುವಜನರಿಗಾಗಿ ಟಾಟಾ, ಇನ್ಫೋಸಿಸ್, ಟೋಯಾಟಾ ಮುಂತಾದ ಪ್ರಸಿದ್ಧ ಕಂಪೆನಿಗಳಿAದ ಉದ್ಯೋಗ ಮೇಳ ನೆಡೆಸುವಂತೆ ಜಿಲ್ಲಾಧ್ಯಕ್ಷರಿಗೆ ಸೂಚನೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಸಂಘದ ಜಿಲ್ಲಾಧ್ಯಕ್ಷ ಕೆ.ಆರ್ ಯೋಗೀಶ್ ಮಾತನಾಡಿ ರೈತರ ಒಳಿತಿಗಾಗಿ ಸಾಮಾಜಿಕ, ಸ್ವತಂತ್ರ ಹೋರಾಟಗಾರರಿಗೆ, ಯೋಧರಿಗೆ, ಸಮಾಜದಲ್ಲಿ ಆರ್ಥಿಕ ಸಂಕಷ್ಟದಲ್ಲಿರುವ ಬಡವರಿಗೆ ಜಿಲ್ಲಾ ಸಂಘದ ವತಿಯಿಂದ ಆರ್ಥಿಕ ನೆರವು ನೀಡಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದರು.

ಮುAದಿನ ದಿನಗಳಲ್ಲಿ ಸಂಘದ ಸರ್ವ ಸದಸ್ಯರ ಸಭೆ ಕರೆದು ಚರ್ಚಿಸಿ ವಿವಿದೋದ್ದೇಶ ಸೌಹಾರ್ಧ ಬ್ಯಾಂಕ್ ಸ್ಥಾಪಿಸಲು ನಿರ್ಧರಿಸುವುದಾಗಿ ಭರವಸೆ ನೀಡಿದರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ. ತಿರುಮಲೇಶ್ ಮಾತನಾಡಿ ಹಾಲು ಉತ್ಪಾಧಕರ ಸಹಕಾರ ಸಂಘ, ಮಾವು ಬೆಳೆಗಾರರ ಸಂಘ, ಕಾಫೀ ಬೆಳೆಗಾರರ ಸಂಘ ಮುಂತಾದ ಸಂಘಗಳು ಶೂನ್ಯದಿಂದ ಆರಂಭವಾಗಿ ಕೋಟ್ಯಾಂತರ ರೂ ವಹಿವಾಟು ನೆಡೆಸುತ್ತಿರುವುದನ್ನು ಕಾಣುತ್ತಿದ್ದು. ಇದೇ ಮಾದರಿಯಲ್ಲಿ ಕೃಷಿ ಪರಿಕರ ಮಾರಾಟಗಾರರ ಸಂಘ ಸೌಹಾರ್ಧ ಬ್ಯಾಂಕ್ ಸ್ಥಾಪಿಸುವ ಮೂಲಕ ಆರ್ಥಿಕ ಸದೃಢರಾಗಬೇಕೆಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ಡಾ. ಮಹಾಬಲ, ಮೈಸೂರು ಕಾರ್ಯದರ್ಶಿ ಮಾಲತೇಶ್, ಬಳ್ಳಾರಿ ತಿಮ್ಮೇಗೌಡ, ಜಿಲ್ಲಾ ಉಪಾಧ್ಯಕ್ಷರುಗಳಾದ ಉದಯ್ ಪೈ, ಟಿ.ಡಿ ತಿಮ್ಮಯ್ಯ, ಖಜಾಂಚಿ ಶ್ರೀಕಾಂತ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಿ.ಮನೂಪ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ