ಚಿಕ್ಕಮಗಳೂರು ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿರುವ ನಟ ಡಾ|| ಪುನೀತ್‌ರಾಜ್ ಕುಮಾರ್ ಪ್ರತಿಮೆಗೆ ಮಂಗಳವಾರ ಸಂಜೆ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಶ್ರೀ ಡಾ. ನಿಶ್ಚಲಾನಂದ ನಾಥ ಸ್ವಾಮೀಜಿ ಭೇಟಿ ನೀಡಿ ಮಾಲಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಹಿರಿಯ ವೈದ್ಯ ಡಾ|| ಜೆ.ಪಿ.ಕೃಷ್ಣೇಗೌಡ, ಬಿಎಸ್ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ. ಟಿ.ರಾಧಾಕೃಷ್ಣ, ಜಿಲ್ಲಾ ಒಕ್ಕಲಿಗರ ಸಂಘದ ಕಾರ್ಯದರ್ಶಿ ಮಾಡ್ಲ ಪ್ರಕಾಶ್, ಜಿಲ್ಲಾ ಡಾ|| ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಐ.ಕೆ.ಓಂಕಾರೇಗೌಡ, ಪ್ರಧಾನ ಕಾರ್ಯದರ್ಶಿ ಬಸವರಾಜ್, ಉಪಾಧ್ಯಕ್ಷ ಜಯಣ್ಣ, ಕಾರ್ಯದರ್ಶಿ ಸೋಮಶೇಖರ್, ನಗರ ಆಟೋ ಅಧ್ಯಕ್ಷ ಜಗದೀಶ್, ಮುಖಂಡರುಗಳಾದ ಸೋ ಮಶೇಖರ್, ಬಿ.ಎಂ.ಕುಮಾರ್, ಕೃಷ್ಣಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.



