ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೇಸ್ ಸಮಿತಿ ಅಧ್ಯಕ್ಷರಾಗಿ ಆರ್ಯ ಪಟೇಲ್ ಅವರನ್ನು ನೇಮಕ ಮಾಡಲಾಗಿದೆ.
ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮಂಜುನಾಥ್ ಹೆಚ್.ಎಸ್. ಅವರು ಆರ್ಯಪಟೇಲ್ ಅವರನ್ನು ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೇಸ್ ಸಮಿತಿ ಅಧ್ಯಕ್ಷರಾಗಿ ನೇಮಕ ಮಾಡಿದ್ದಾರೆ.
ಸಂಘಟನೆಯನ್ನು ಬಲಗೊಳಿಸುವ ಹಿನ್ನಲೆಯಲ್ಲಿ ಹಾಗೂ ಸಂಘಟನೆಯನ್ನು ರಾಜ್ಯದಾದ್ಯಂತ ಸಕ್ರಿಯಗೊಳಿಸಲು ಮಾನ್ಯ ಅಖಿಲ ಭಾರತ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಗಳು ಮತ್ತು ಕರ್ನಾಟಕ ಉಸ್ತುವಾರಿಗಳಾದ ನಿಗಮ್ ಭಂಡಾರಿ ಯವರ ಅನುಮೋದನೆಯೊಂದಿಗೆ ಅರ್ಯ ಪಟೇಲ್ ಅವರನ್ನು ಚಿಕ್ಕಮಗಳೂರು ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಮೂಡಿಗೆರೆ ವಿಧಾನಸಭಾ ಅಧ್ಯಕ್ಷರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ.
ತಮಗೆ ನೀಡಿರುವ ಜವಾಬ್ದಾರಿಯನ್ನು ವಹಿಸಿಕೊಂಡು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಯುವ ಕಾಂಗ್ರೆಸ್ ಉಸ್ತುವಾರಿಗಳು, ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಹಿರಿಯ ಮುಖಂಡರ ಮಾರ್ಗದರ್ಶನ ಮತ್ತು ಸ್ಥಳೀಯ ನಾಯಕರುಗಳ ಸಹಕಾರದೊಂದಿಗೆ ಯುವ ಕಾಂಗ್ರೆಸ್ ಸಂಘಟನೆಯನ್ನು ಬಲಗೊಳಿಸಲು ಎಲ್ಲ ರೀತಿಯಲ್ಲಿ ಸಹಕರಿಸಬೇಕಾಗಿ ಈ ಮೂಲಕ ಕೋರುತ್ತೇನೆ. ಈ ಕಾರ್ಯದಲ್ಲಿ ತಮಗೆ ಎಲ್ಲ ರೀತಿಯ ಯಶಸ್ಸು ಸಿಗಲಿ ಎಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮಂಜುನಾಥ್ ಹೆಚ್.ಎಸ್. ಶುಭ ಹಾರೈಸಿದ್ದಾರೆ.

ಮೂಡಿಗೆರೆ ಯುವ ಕಾಂಗ್ರೇಸ್ ಅಧ್ಯಕ್ಷರಾಗಿ ನೇಮಕವಾಗಿರುವ ಆರ್ಯ ಪಟೇಲ್ ಅವರಿಗೆ ಶಾಸಕಿ ನಯನಾ ಮೋಟಮ್ಮ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಶುಭ ಹಾರೈಸಿದ್ದಾರೆ.
ಇಂಜಿನಿಯರ್ ಪದವೀದರರಾದ ಆರ್ಯಪಟೇಲ್ ಮೂಡಿಗೆರೆ ತಾಲ್ಲೂಕು ಕಡಿದಾಳು ಗ್ರಾಮದವರು. ಕೃಷಿಕ ಸುಕುಮಾರ್ ಮತ್ತು ಹೇಮಾ ಅವರ ಪುತ್ರ. ಆರ್ಯಪಟೇಲ್ ಕಳೆದ ಕೆಲ ವರ್ಷಗಳಿಂದ ಯುವ ಕಾಂಗ್ರೇಸ್ ನಲ್ಲಿ ಸಕ್ರಿಯ ಕಾರ್ಯಕರ್ತರಾಗಿ ತೊಡಗಿಸಿಕೊಂಡಿದ್ದಾರೆ.



