beluru 1

 

 

ತಹಶೀಲ್ದಾರ್ ವಿರುದ್ಧ ಕಿರುಕುಳ ಆರೋಪ ಮಾಡಿ ಮಾತ್ರೆ ಸೇವಿಸಿ ಶಿರಸ್ತೇದಾರ್ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಬೇಲೂರು ತಹಶೀಲ್ದಾರ್​ ಶ್ರೀಧರ್ ಕಂಕನವಾಡಿ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದ್ದು, ತನ್ವೀರ್ ಅಹ್ಮದ್ ಆತ್ಮಹತ್ಯೆಗೆ ಯತ್ನಿಸಿರುವ ವ್ಯಕ್ತಿಯಾಗಿದ್ದಾರೆ. ತನ್ವೀರ್​​ನ್ನು ಬೇಲೂರು ಆಸ್ಪತ್ರೆಗೆ ಸಿಬ್ಬಂದಿ ದಾಖಲಿಸಿದ್ದು, ತಮ್ಮ ಮೇಲಿನ ಆರೋಪವನ್ನು ಶ್ರೀಧರ್ ನಿರಾಕರಿಸಿದ್ದಾರೆ.

ತಹಶೀಲ್ದಾರ್ ಅವರು ಬೇಕಂತಲೇ ಕೆಲಸದ ಒತ್ತಡ ಹೇರುತ್ತಿರುವ ಜೊತೆಗೆ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ತಾಲೂಕು ಕಚೇರಿ ಮುಂಭಾಗದಲ್ಲೇ ಮಾತ್ರೆಗಳನ್ನು ಸೇವಿಸಿ ತನ್ವೀರ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ತಹಸೀಲ್ದಾರ್​​ ಅವರು, ತನ್ವೀರ್ ಅಹಮದ್ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ. ಜೊತೆಗೆ ಆತ್ಮಹತ್ಯೆಗೆ ಯತ್ನಿಸಿರುವ ವ್ಯಕ್ತಿ ವಿರುದ್ಧವೇ ದೂರು ನೀಡಲು ಮುಂದಾಗಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ