February 13, 2026

 

 

ಚಿಕ್ಕಮಗಳೂರು ನಲ್ಲಿ ವಲಸೆ ಕಾರ್ಮಿಕರಿಂದ ಸ್ಥಳೀಯ ಉದ್ಯಮಿ ತೇಜ್ ಕುಮಾರ್ ರವರ ಕೊಲೆ ಪ್ರಕರಣ ಖಂಡಿಸಿ ಹಾಗೂ ಬಾಂಗ್ಲಾ ವಲಿಸಿಗರು, ಅಕ್ರಮ ವಲಸೆ ಕಾರ್ಮಿಕರು ಅನೈತಿಕ ಚಟುವಟಿಕೆ ಗಳನ್ನು ಮಾಡುತ್ತಿದ್ದು ಅವರ ಮೇಲೆ  ಸೂಕ್ತ ಕ್ರಮ ಕೈ ಗೊಳ್ಳುವಂತೆ ಆಗ್ರಹಿಸಿ ಗುರುವಾರ ಬಿಜೆಪಿ ಜಿಲ್ಲಾ ಎಸ್ ಸಿ ಮೋರ್ಚಾ ಅಧ್ಯಕ್ಷ  ಕುರುವಂಗಿ ವೆಂಕಟೇಶ್  ನೇತೃತ್ವದಲ್ಲಿ ಜಿಲ್ಲಾ ಪೊಲೀಸ್  ವರಿಷ್ಠಾಧಿಕಾರಿಗಳಿಗೆ  ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಯ ವಿವಿಧ ಜವಾಬ್ದಾರಿಯ ಪ್ರಮುಖರುಗಳು ಎಸ್ ಸಿ ಮೋರ್ಚಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕುರುವಂತಿ ವೆಂಕಟೇಶ್ ಮಾಧ್ಯಮದವರೊಂದಿಗೆ ಮಾತನಾಡಿ ; ವಲಸೆ ಕಾರ್ಮಿಕರಿಂದ ಜಿಲ್ಲೆಯಲ್ಲಿ ಕ್ರಿಮಿನಲ್ ಪ್ರಕರಣಗಳು ಹೆಚ್ಚುತ್ತಿವೆ. ಕಳ್ಳತನದಿಂದ ಕೊಲೆ ಮಾಡುವವರೆಗೆ ವಲಸೆ ಕಾರ್ಮಿಕರು ಕ್ರೈಂ ಪ್ರಕರಣಗಳಲ್ಲಿ ಭಾಗಿಯಾಗುತ್ತಿದ್ದಾರೆ. ಪ್ರವಾಸಿ ತಾಣವಾಗಿರುವ ಚಿಕ್ಕಮಗಳೂರಿನಲ್ಲಿ ಈ ರೀತಿಯ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಪ್ರವಾಸಿಗರು ಜಿಲ್ಲೆಗೆ ಬರಲು ಹಿಂದೇಟು ಹಾಕಬಹುದು. ಈ ನಿಟ್ಟಿನಲ್ಲಿ ವಲಸೆ ಕಾರ್ಮಿಕರ ನಿಯಂತ್ರಣಕ್ಕೆ ಪೊಲೀಸ್ ಇಲಾಖೆ ಕಠಿಣ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ