ದೇಶದ ಅತ್ಯುನ್ನತ ಶಾಂತಿಕಾಲದ ಶೌರ್ಯ ಪ್ರಶಸ್ತಿ ಅಶೋಕ ಚಕ್ರ ಈ ಬಾರಿ ಭಾರತೀಯ ವಾಯುಪಡೆಯ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರಿಗೆ ಸಿಗಲಿದೆ. ಗಣರಾಜ್ಯೋತ್ಸವ ಮುನ್ನ ದಿನ ಕೇಂದ್ರ ಸರ್ಕಾರ ಪ್ರಶಸ್ತಿಯನ್ನು ಪ್ರಕಟಿಸಿಸಿದೆ.
ಆಕ್ಸಿಯಮ್ -4 ಕಾರ್ಯಾಚರಣೆಯ ಪೈಲಟ್ ಆಗಿ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ISS) ಭೇಟಿ ನೀಡಿದ ಮೊದಲ ಭಾರತೀಯ ಇಸ್ರೋ (ISRO) ಗಗನಯಾತ್ರಿ ಎಂಬ ಹೆಗ್ಗಳಿಕೆಗೆ ಶುಕ್ಲಾ ಪಾತ್ರರಾಗಿದ್ದಾರೆ. ಜೂನ್ 2025 ರಲ್ಲಿ ಅವರು ಐಸಿಸ್‌ಗೆ ಭೇಟಿ ನೀಡಿದ ಮೊದಲ ಭಾರತೀಯ ಮತ್ತು ರಾಕೇಶ್ ಶರ್ಮಾ ನಂತರ ಬಾಹ್ಯಾಕಾಶಕ್ಕೆ ಪ್ರಯಾಣಿಸಿದ ಎರಡನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಇತಿಹಾಸ ನಿರ್ಮಿಸಿದ್ದರು.
ಬಾಹ್ಯಾಕಾಶದಲ್ಲಿ 18 ದಿನಗಳ ಅವಧಿಯಲ್ಲಿ ಶುಕ್ಲಾ ಭಾರತಕ್ಕೆ ಸಂಬಂಧಿಸಿದ ಏಳು ನಿರ್ದಿಷ್ಟ ಪ್ರಯೋಗಗಳನ್ನು ನಡೆಸಿದ್ದರು. ಈ ಪರೀಕ್ಷೆಗಳು ಕೇವಲ ಪ್ರದರ್ಶನಕ್ಕಾಗಿ ಮಾತ್ರವಾಗಿರಲಿಲ್ಲ; ಗಗನಯಾನ ಕಾರ್ಯಾಚರಣೆಯಲ್ಲಿರುವ ಭವಿಷ್ಯದ ಗಗನಯಾತ್ರಿಗಳು ಭೂಮಿಯ ಕೆಳ ಕಕ್ಷೆಯ ಕಠಿಣ ಪರಿಸರದಲ್ಲಿ ಬದುಕುಳಿಯಲು ಸಹಾಯ ಮಾಡುವ ಅಗತ್ಯ ಡೇಟಾವನ್ನು ಅವು ಒದಗಿಸಿದ್ದವು.



